ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಕಲಬುರಗಿ/ಚಿತ್ತಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ “ಸರಳ ಸಾಮೂಹಿಕ ವಿವಾಹ ಯೋಜನೆ” ಅಡಿಯಲ್ಲಿ ಸರಳ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ.

ಈ ಯೋಜನೆಯಡಿ ಸ್ವಸಹಾಯ ಸಂಘಗಳು, ಧಾರ್ಮಿಕ ಟ್ರಸ್ಟ್‌ಗಳು, ವಕ್ಫ್‌ನಲ್ಲಿ ನೋಂದಾಯಿತ ಸಂಸ್ಥೆಗಳು, ಸ್ವಯಂ-ಸೇವಾ ಸಂಘಟನೆಗಳು ಅಥವಾ ವಕ್ಫ್ ನೋಂದಾಯಿತ ಖಾಸಗಿ ಆಯೋಜಕರು ಕನಿಷ್ಠ 10 ಜೋಡಿಗಳ ಸಾಮೂಹಿಕ ವಿವಾಹ ಆಯೋಜಿಸಿದರೆ, ಪ್ರತಿ ವಿವಾಹ ಜೋಡಿಗೆ ₹50,000 ಹಾಗೂ ಆಯೋಜಕರಿಗೆ ಪ್ರತಿ ಜೋಡಿಗೆ ₹5,000 ಆರ್ಥಿಕ ಪ್ರೋತ್ಸಾಹಧನ ನೀಡಲಾಗುವುದು ಎಂದು ಕಾಳಗಿ ತಾಲೂಕು ವಿಸ್ತಾರಣಾಧಿಕಾರಿ ಶೇಖ್ ಫಹೀಮುದ್ದೀನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ ಒಟ್ಟು 300 ಜೋಡಿಗಳ ಸರಳ ವಿವಾಹ ಗುರಿ ನಿಗದಿಪಡಿಸಲಾಗಿದ್ದು, ಅದರೊಳಗೆ ಚಿತ್ತಾಪುರ ತಾಲೂಕಿಗೆ 55 ಜೋಡಿಗಳ ಗುರಿ ನಿಗದಿಯಾಗಿದೆ.

ಚಿತ್ತಾಪುರ ತಾಲೂಕಿನ ವ್ಯಾಪ್ತಿಯಲ್ಲಿರುವ ಸ್ವಸಹಾಯ ಸಂಘಗಳು, ದೇವಸ್ಥಾನ ಟ್ರಸ್ಟ್‌ಗಳು, ಎನ್‌ಜಿಒಗಳು, ವಕ್ಫ್ ಬೋರ್ಡ್‌ನಲ್ಲಿ ನೋಂದಾಯಿತ ಟ್ರಸ್ಟ್‌ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹಗಳಲ್ಲಿ ವಿವಾಹವಾದ ಜೋಡಿಗಳು ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತಾರಣಾಧಿಕಾರಿ ಶೇಖ್ ಫಹೀಮುದ್ದೀನ್ ಅವರು, ತಾಲ್ಲೂಕಿನ ಎಲ್ಲಾ ಸಂಸ್ಥೆಗಳು ಮತ್ತು ಆಯೋಜಕರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತಾಲ್ಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಸಾಮರ್ಥ್ಯ ಸೌಧ, ತಾಲ್ಲೂಕ ಪಂಚಾಯತ್ ಕಛೇರಿ, ಚಿತ್ತಾಪುರ – 585211
99725 54852 – 96634 13012

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!