
ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾದ ಸರಕಾರಿ ಶಾಲಾ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಸದಸ್ಯರಾದ ಸುರೇಶ ಸ್ವಾಮಿ ಹಾಗೂ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಚೇತನ ಕಾಡೆ ಒತ್ತಾಯಿಸಿದ್ದಾರೆ.

ಬೀದರ್/ಬಸವಕಲ್ಯಾಣ: ತಾಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲ ಸರಕಾರಿ ಶಾಲಾ ಶಿಕ್ಷಕರು ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾಗಿರುವುದರಿಂದ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೆಕೆಂದು ಒತ್ತಾಯಿಸಿದ್ದಾರೆ. ಉದಾಹರಣೆಗೆ ಇತ್ತಿಚೆಗೆ ನಡೆದ ಆರ್. ಎಸ್. ಎಸ್. ಪಥಸಂಚಲನದಲ್ಲಿ ಭಾಗಿಯಾಗಿ ಬೇಜವಾಬ್ದಾರಿತನ ತೋರಿದ್ದಾರೆ. ಸರಕಾರಿ ಸಂಬಳ ಪಡೆದು ಯಾವುದೇ ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾಗಬಾರದೆಂದು ನಿಯಮವಿದ್ದರೂ ಬಸವಕಲ್ಯಾಣದಲ್ಲಿ ಕೆಲ ಸರಕಾರಿ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರದ ನಗರಸಭೆ ಮಾಜಿ ಸದಸ್ಯರಾದ ಸುರೇಶ ಸ್ವಾಮಿ, ಮುಖಂಡರಾದ ಧನರಾಜ ರಾಜೋಳೆ, ಹಾಗೂ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಚೇತನ ಕಾಡೆ ಇಂದು ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರದ ಮುಖಾಂತರ ಒತ್ತಾಯಿಸಿದ್ದಾರೆ.
ವರದಿ : ಶ್ರೀನಿವಾಸ ಬಿರಾದಾರ



















