ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾರೆಮ್ಮ ದೇವಿ ದೇವಸ್ಥಾನ ಪುನರ್ ನಿರ್ಮಾಣಕ್ಕೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊರವರ ಓಣಿಯಲ್ಲಿರುವ ಸುಮಾರು 300 ವರ್ಷಗಳಷ್ಟು ಹಳೆಯದಾದ ಹಾಗೂ ಕೊರವರ ಸಮುದಾಯದ ಆರಾಧ್ಯ ದೇವಿಯಾದ ಶ್ರೀ ಕೊರವರ ಮಾರೆಮ್ಮ ದೇವಿ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆಯನ್ನು ನೆರವೇರಿಸಿದರು.
ಪಟ್ಟಣದ ಕೊರವರ ಓಣಿಯಲ್ಲಿರುವ ಕೊರವರ ಮಾರೆಮ್ಮ ದೇವಿ ದೇವಸ್ಥಾನವು ಅತ್ಯಂತ ಪುರಾತನವಾಗಿದ್ದು, ಶಿಥಿಲಗೊಂಡಿದ್ದು, ಕೊರವರ ಸಮುದಾಯದವರು ದೇವಸ್ಥಾನ ಪುನರ್ ನಿರ್ಮಾಣಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ದೇವಸ್ಥಾನ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ದೇವಸ್ಥಾನ ನಿರ್ಮಾಣಕ್ಕೆ ಈಗಾಗಲೇ 5 ಲಕ್ಷರೂಗಳನ್ನು ತಮ್ಮ ಶಾಸಕರ ಅನುನದಾನದಲ್ಲಿ ಒದಗಿಸಲಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನೂ ನೀಡಲಾಗುವುದು ಎಂದರು.
ಕಂಪ್ಲಿ ತಾಲ್ಲೂಕು ಕೊರವರ ಸಮುದಾಯದ ಕಾರ್ಯದರ್ಶಿ ವಿರೂಪಾಕ್ಷಿ ಮಾತನಾಡಿ, ನಮ್ಮ ಸಮುದಾಯದ ಹಿರಿಯರು ನೂರಾರು ವರ್ಷಗಳ ಹಿಂದೆ ನಿರ್ಮಿಸಿದ ದೇವಿಯ ದೇವಸ್ಥಾನ ಶಿಥಿಲಗೊಂಡಿದ್ದು, ಅದನ್ನು ಪುನರ್ಮಿಸಲು ಸಮುದಾಯದವರು ಮುಂದಾಗಿದ್ದು, ಸುಮಾರು 35 ರಿಂದ 40 ಲಕ್ಷ ರೂಗಳ ವೆಚ್ಚದಲ್ಲಿ ಶಿಲಾದೇವಸ್ಥಾನ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಶಾಸಕರು ಅನುದಾನ ಒದಗಿಸುವುದಾಗಿ ಭರವಸೆಯನ್ನು ನೀಡಿದ್ದು, ಈಗಾಗಲೇ 5 ಲಕ್ಷರೂ.ಗಳನ್ನು ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ, ಕೊರವರ ಸಮಾಜದ ಗೌರವಾಧ್ಯಕ್ಷ ಮಲ್ಲಪ್ಪ, ಅಧ್ಯಕ್ಷ ಯಂಕಪ್ಪ, ಮುಖಂಡರಾದ ಹೊಳೆಯಪ್ಪ, ಗಂಗಾಧರ್, ಹನುಮಂತಪ್ಪ, ಜಂತಕಲ್ ಹನುಮಂತಪ್ಪ, ಹುಲುಗಪ್ಪ, ಶ್ರೀನಿವಾಸ್, ದರೋಜಿ ಬಸವರಾಜ, ತೆಕ್ಕಲಕೋಟೆ ಹುಲುಗಪ್ಪ, ಕೆ.ರಾಮಾಲಿಸ್ವಾಮಿ, ಕೆ.ಸುರೇಶ, ಸೀನಪ್ಪ, ಬಿ.ರಾಮ, ಜಂತಕಲ್ ಸಣ್ಣ ಹನುಮಂತ ಸೇರಿದಂತೆ ಸಮುದಾಯದವರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!