ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರವಿವಾರ ದಿ.26ರಂದು ಬೆಳಿಗ್ಗೆ 8.30 ಕ್ಕೆ 119 ನೇ ರವಿವಾರದ ಸತ್ಸಂಗ ಸಭೆ ಹಾಗೂ ಆರೂಢರ ಪಂಚಾಮೃತ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವು ಆಶ್ರಮದ ಪ.ಪೂ.ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ಜರುಗಲಿದೆ ಎಂದು ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಯುವ ಮುಖಂಡ ಎಲ್. ಶ್ರೀನಿವಾಸ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಭಕ್ತಸಮೂಹದಿಂದ ಓಂಕಾರ ನಾಮಸ್ಮರಣೆ, ಅದ್ವೈತ ಸಾವ೯ಭೌಮ ಶ್ರೀ ಸಿದ್ಧಾರೂಢರ ಪಾರಾಯಣ ಜರುಗುವುದು ನಂತರ ಮಂಗಲ ಪ್ರಸಾದ ವಿತರಣೆ ಮಾಡಲಾಗುವುದು ಎಂದು ಶ್ರೀನಿವಾಸ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















