ರಾಯಚೂರು ಜಿಲ್ಲೆಯ ಲಿಂಗಸುಗೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಹಾಕಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ PU ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಐಶ್ವರ್ಯ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನೆ ಕೊಲೆ ಮಾಡಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬಂಧಿಕರು ಆರೋಪಿಸಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಸಂಜೆ ನಡೆದಿರೋ ಘಟನೆ ಇದಾಗಿದ್ದು,ಪ್ರಥಮ PU ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಾಸವಿದ್ದಳು. ಆಗಾಗ ಪ್ರಿನ್ಸಿಪಾಲ್ ತನ್ನ ರೂಮ್ಗೆ ಕರೆಸಿಕೊಳ್ಳುತ್ತಿದ್ದನಂತೆ ಹೀಗಾಗಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಂದು ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಾಂಶುಪಾಲ ರಮೇಶ್ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ :ರವಿಕುಮಾರ್ ಪಾಟೀಲ್