ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಸಾಯಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕೊಪ್ಪಳ ಜಿಲ್ಲೆಯ ಕನಕಗಿರಿಯ ಶ್ರೀ ಸಾಯಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡಾಂಬೆ ಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ಮಕ್ಕಳು ವಚನಕಾರರಾದ ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಸೇರಿದಂತೆ ದಾಸರು, ಶರಣರ ವೇಷಗಳನ್ನು ಧರಿಸಿಕೊಂಡು ಮುದ್ದಾಗಿ ಕಾಣಿಸಿಕೊಂಡರು.
ಶಾಲೆಯಲ್ಲಿ ಮಕ್ಕಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಕೂಡ ಆಯೋಜಿಸಲಾಗಿತ್ತು.
ಮತ್ತು ಪಟ್ಟಣದಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ಶಾಲೆಯ ಮಕ್ಕಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ,
ಶಿಕ್ಷಕಿಯರಾದ ಕಾವ್ಯ ಭಾವಿಕಟ್ಟಿ,
ಕವಿತಾ . ಟಿ.,
ಮರಿಯಮ್ಮ,
ರಾಜೇಶ್ವರಿ,
ಶಿಕ್ಷಕರಾದ ಮಂಜುನಾಥ ಮಿಟ್ಲಕೋಡ,
ಮಂಜುನಾಥ ಪಾಟೀಲ್ ಹಾಗೂ ಬೋಧಕೇತರ ಸಿಬ್ಬಂದಿ ವೆಂಕಟೇಶ ಹಾಗೂ ಶಾಲೆಯ ಪಾಲಕರು ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಮಾನ್ಯ ತಹಶೀಲ್ದಾರರು ಅಭಿನಂದನಾ ಪತ್ರ ನೀಡಿದರು.

ವರದಿ ಹನುಮಂತಪ್ಪ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!