ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜವಾಬ್ದಾರಿಯುತ ನೌಕರರ ನೇಮಕಕ್ಕೆ ಕರುನಾಡ ವಿಜಯ ಸೇನೆಯ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಆಗ್ರಹ

ಉತ್ತರ ಕನ್ನಡ :ಹೊನ್ನಾವರ ಪಟ್ಟಣ ಪಂಚಾಯತ ಕಛೇರಿಯಲ್ಲಿ ಜವಾಬ್ದಾರಿಯುತ ಸರಿ ಸುಮಾರು8-9 ಸರ್ಕಾರಿ ನೌಕರರ ಕೊರತೆ ಇದೆ. ಅದನ್ನು ಕೊಡಲೇ ಭರ್ತಿ ಮಾಡಬೇಕು ಹಾಗೂ ಪಟ್ಟಣ ಪಂಚಾಯಿತಿಯಲ್ಲಿ ಘನತ್ಯಾಜ್ಯ ವಸ್ತು ವಿಲೇವಾರಿಗೆ ಕಾರ್ಮಿಕರ (ಪೌರಕಾರ್ಮಿಕರು) ನೇಮಕವಾಗಬೇಕೆಂದು ಜಿಲ್ಲಾಧಿಕಾರಿಗಳ ಆದೇಶವಾದರೂ ಕಣ್ಮುಚ್ಚಿ ಕುಳಿತಿರುವ ಪಟ್ಟಣ ಪಂಚಾಯತ್, ಕಂದಾಯ ಇಲಾಖೆ, ಸರ್ವೇ ಇಲಾಖೆ, ಸರ್ಕಾರಿ ಆಸ್ಪತ್ರೆಯ ಕೆಲ ಸಿಬ್ಬಂದಿಗಳು ಸಾರ್ವಜನಿಕ ರೊಂದಿಗೆ ಸ್ಪಂದಿಸದೆ ಜನರು ಪರದಾಡುವಂತಾಗಿದೆ. ಜನವಿರೋಧಿ ಧೋರಣೆಯ ಸಿಬ್ಬಂದಿಗಳನ್ನು ಕೂಡಲೇ ವರ್ಗಾಸಬೇಕು ಎಂದು ಕರುನಾಡ ವಿಜಯ ಸೇನೆಯ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಆಗ್ರಹಿಸಿದ್ದಾರೆ.
ಹೊನ್ನಾವರ ಪಟ್ಟಣ ಪಂಚಾಯತ ಕಛೇರಿಯಲ್ಲಿ ಪ್ರಮುಖವಾಗಿ ಸರಿಸುಮಾರು 8-9 ಸಿಬ್ಬಂದಿಗಳ ಕೊರತೆ ಇದೆ. ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಛೇರಿಯ ಸಿಬ್ಬಂದಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ಜನರು ಪರದಾಡುವಂತಾಗಿದೆ. ಹಲವು ವರ್ಷಗಳಿಂದ ಬೀಡುಬಿಟ್ಟಿರುವ ಕೆಲವು ಸಿಬ್ಬಂದಿಗಳ ಜೊತೆ ಗುತ್ತಿಗೆ ಆಧಾರದ ಸಿಬ್ಬಂದಿಗಳು ಇದೇ ಕಛೇರಿಯಲ್ಲಿ ಇರುವುದರಿಂದ ಜನರ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುವಂತಾಗಿದೆ. ಇವರು ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ ಗೌರವದಿಂದ ಸ್ಪಂದಿಸದೆ ಉಡಾಫೆಯಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಬೇರೆಡೆಗೆ ವರ್ಗಾಯಿಸಬೇಕು. ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಇವರ ಕಾರ್ಯವೈಖರಿಯನ್ನು ಸರಿಯಾಗಿ ಪರಿಶೀಲಿಸದೆ ಇರುವುದು ಒಂದು ಕಾರಣವಾಗಿದೆ. ಈ ಹಿಂದೆ ಗುತ್ತಿಗೆ ನೌಕರರಿಗೆ ಬೇರೆಡೆಗೆ ವರ್ಗಾಯಿಸಲು ನಿರ್ಣಯಿಸಲಾಗಿತ್ತು. ಆದರೆ ಅವರಿಗೆ ಇಲ್ಲೇ ಇರುವಂತೆ ಯಾರು ಒತ್ತಡ ತಂದರೋ ತಿಳಿಯದಾಗಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!