ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚುಟುಕು ಸಾಹಿತ್ಯ ಸಮ್ಮೇಳನದಿಂದಜನಜಾಗೃತಿ ಸಾಧ್ಯ : ಎಂ. ಎಲ್. ಸಿ.ಹೇಮಲತಾ ನಾಯಕ್

ಕೊಪ್ಪಳ : ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ನವಂಬರ್ ೯ ರಂದು ರಂದು ಹಮ್ಮಿಕೊಂಡಿರುವ ೧೧ನೆಯ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಮೂಲಕ ಸಹಸ್ರಾರು ಜನರಿಗೆ ಜಾಗೃತಿ ಆಂದೋಲನ ಮೂಲಕ ತಿಳುವಳಿಕೆ ನೀಡಲು ಎಲ್ಲಾ ಕನ್ನಡಿಗರು ಕೈಜೋಡಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಹೇಳಿದರು. ಅವರು ಶನಿವಾರ ಕೊಪ್ಪಳದಲ್ಲಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ೧೧ನೆಯ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಅನುದಾನವಿಲ್ಲದೇ ನಿರಂತರ ಚಟುವಟಿಕೆ ಮೂಲಕ ಜನರಿಗೆ ಅಕ್ಷರದ ಬೀಜ ಬಿತ್ತುವ ಪರಿಷತ್ ಕಾಯ೯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಸಾಹಿತ್ಯ ಕೆಲಸಗಳಿಗೆ  ಪ್ರತಿಯೊಬ್ಬರೂ
ಪ್ರೋತ್ಸಾಹ  ಬೆಂಬಲ ನೀಡಿ ಸಮ್ಮೇಳನ ಯಶಸ್ವಿಗೆ ಸರ್ವರೂ ಶ್ರಮಿಸಬೇಕೆಂದು ತಿಳಿಸಿದರು.
ಈ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರುದ್ರಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಡಾ. ಮಹಾಂತೇಶ್ ನೆಲಾಗಣಿ, ಕೊಪ್ಪಳ ತಾಲೂಕು ಅಧ್ಯಕ್ಷ ಸಾಹಿತಿಗಳಾದ ಮೈಲಾರಪ್ಪಉ೦ಕಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಹಾದಿಮನಿ, ಹಿರಿಯ ಕವಯಿತ್ರಿ ಪುಷ್ಪಲತಾ ಯೊಳುಭಾವಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

– ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!