ಶಿವಮೊಗ್ಗ : ಭದ್ರಾವತಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘ, ಜನ್ನಾಪುರ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜನಾಯಕ್ ಬಿ. ಆರ್. ಅವರು ತಮ್ಮ ಕಾವ್ಯಪ್ರತಿಭೆಯಿಂದ ಹೆಸರನ್ನು ಗಳಿಸಿದ್ದಾರೆ.
ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಶಿಕಾರಿಪುರ ತಾಲೂಕು ಮಟ್ಟದ ದಸರಾ ಕವಿ ಗೋಷ್ಠಿಗೆ ಆಯ್ಕೆಯಾಗಿ ಕವನವಾಚನ ಮಾಡಿದ ಅವರು, ನಂತರ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕರ್ನಾಟಕ ಜಾನಪದ ಪರಿಷತ್ಗಳ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಕವನ ವಾಚನ ಕಾರ್ಯಕ್ರಮಕ್ಕೂ ಆಯ್ಕೆಯಾಗಿ ತಮ್ಮ ಮನಮೋಹಕ ಕವನ ವಾಚನದಿಂದ ಪ್ರಶಂಸೆಯನ್ನು ಗಳಿಸಿದ್ದಾರೆ.
ಇವರ ಈ ಸಾಧನೆ ಭದ್ರಾವತಿ ತಾಲ್ಲೂಕಿನ ಶಿಕ್ಷಕ ವೃಂದಕ್ಕೆ ಹಾಗೂ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಗೆ ಗೌರವ ತಂದುಕೊಟ್ಟಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್.




















One Response
I visited a lot of website but I conceive this one holds something special in it in it