ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೌರಿ ಹಬ್ಬದ ಅಂಗವಾಗಿ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸತತ 12ನೇ ವರ್ಷದ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಂತರ ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ. ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
ಜಿ. ಪಂ. ಮಾಜಿ ಸದಸ್ಯ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಮಾತನಾಡಿ, ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ. ವಧು ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಇಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಸಾಮಾಜಿಕ ಕಳಕಳಿಯೊಂದಿಗೆ ನಡೆಸುವ ಸಾಮೂಹಿಕ ವಿವಾಹ ಮಹೋತ್ಸವ ನಿಜಕ್ಕೂ ಶ್ಲಾಘನೀಯ ಎಂದರು.
ಮುಖಂಡ ಶಿವಶಂಕರಗೌಡ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಗ್ರಾಪಂ ಉಪಾಧ್ಯಕ್ಷ ಕಂಪ್ಲಿ ಕ್ಷೇತ್ರ ಎಸ್ಸಿ ಘಟಕದ ಅಧ್ಯಕ್ಷ ಆರ್.ಎಂ.ರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಲ್ಲಿನ ಉಚಿತ ಸಾಮೂಹಿಕ ವಿವಾಹದಲ್ಲಿ 28 ಜೋಡಿಗಳು ನವ ವಸಂತಕ್ಕೆ ಕಾಲಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಜಗದೀಶಗೌಡ, ಕಮಲಾಪುರ ಸೋಮಶೇಖರ, ಕೊಟ್ಟಾಲ್ ವಿರೇಶ, ಹಾನಿ ಈರಣ್ಣ, ಕೆ.ಷಣ್ಮುಕಪ್ಪ, ವೀರಾಂಜಿನೀಯಲು, ಹೊಸಕೋಟೆ ಜಗದೀಶ, ಎ.ಸಿ.ದಾನಪ್ಪ, ಹೊನ್ನಳ್ಳಿ ಗಂಗಧಾರ, ಬಿ.ಸಿದ್ದಪ್ಪ, ಮೆಟ್ರಿ ಗಿರೀಶ್, ಬಳೆ ಮಲ್ಲಿಕಾರ್ಜುನ, ಜಾಫರ್ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!