ಬೆಂಗಳೂರು: ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ಜೊತೆಗೂಡಿ ಬೆಂಗಳೂರು ಕೌಶಲ್ಯ ಶೃಂಗಸಭೆ – 2025ಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲರು ಚಾಲನೆ ನೀಡಿದರು.
ಬೆಂಗಳೂರು ಕೌಶಲ್ಯ ಶೃಂಗಸಭೆ ಕರ್ನಾಟಕದ ಕೌಶಲ್ಯ ಪಯಣದಲ್ಲಿ ಒಂದು ಹೊಸ ಮೈಲಿಗಲ್ಲು ಸೃಷ್ಠಿಸಲಿದೆ. ವಿಶ್ವದಲ್ಲಿಯೇ ಕರ್ನಾಟಕವನ್ನು ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವುದು ನಮ್ಮ ಗುರಿಯಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಶರಣಪ್ಪ ದರ್ಶನಾಪುರ್, ಮಾರಿಷಸ್ ಸಚಿವರಾದ ಶ್ರೀ ಮೊಹಮ್ಮದ್ ರೆಜಾ ಖಾಸಂ ಉತೀಮ್, ಸಂಸದರಾದ ಶ್ರೀ ರಾಧಾಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ್ ಭಂಡಾರಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯ್ಕ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ



















