ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ಯಾರಂಟಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆ.

ಚಾಮರಾಜನಗರ ಜಿಲ್ಲೆಯ/ ಕೊಳ್ಳೇಗಾಲ ತಾಲೂಕಿನ: ಬಸ್ತಿಪುರದಲ್ಲಿ ಆಯೋಜಿಸಿದ್ದ ಪಂಚ ಗ್ಯಾರೆಂಟಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಎ.ಆರ್ ಕೃಷ್ಣ ಮೂರ್ತಿ ಮಾತನಾಡಿ ರಾಜ್ಯದ ಜನತೆಗೆ ವಿಶ್ವಾಸ ಪ್ರೀತಿಯಿಂದ ನಮ್ಮ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಸ್ಥಾನಗಳನ್ನು ಕೊಡುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರವನ್ನು ತಂದಿದ್ದಾರೆ ರಾಜ್ಯದಲ್ಲಿ ಸಿದ್ದರಾಮಯ್ಯನವರ ಆಡಳಿತ ವೈಖರಿಯನ್ನು ನೋಡಿ ಮೆಚ್ಚಿ ಮತ್ತೆ ಅಧಿಕಾರಕ್ಕೆ ತಂದಿದ್ದಾರೆ, ರಾಜ್ಯದ ಜನತೆಗೆ ಭಾಗ್ಯಗಳ ಭಾಗ್ಯ ಕೊಟ್ಟಂತಹ ಮುಖ್ಯಮಂತ್ರಿಗಳು ಯಾರಾದರೂ ಇದ್ದರೆ ಅಂದರೆ ಅದು ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯನವರು, ಹಿಂದೆ ನಾನು ಸಿದ್ದರಾಮಯ್ಯ ನವರ ನಾಯಕತ್ವದಲ್ಲಿ ಶಾಸಕನಾಗಿದ್ದೆ ನಂತರ ಹಲವಾರು ಸೋಲನ್ನು ಕಂಡು ಈ 2023 ರ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಕೊಟ್ಟು ನನ್ನನ್ನ ಗೆಲ್ಲಿಸಿ ಶಾಸಕನಾಗಿ ಮಾಡಿ ವಿಧಾನಸಭೆಗೆ ಕಳುಹಿಸಿದಿರು ರಾಜ್ಯದಲ್ಲಿ ಅಧಿಕ ಮತ ಗಳಿಸಿ ಜಯಗಳಿದಿವರಲ್ಲಿ ನಾನು ಐದನೇ ಸ್ಥಾನದಲ್ಲಿದ್ದೇನೆ, ಮೊದಲು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಾಸಕನಾಗಿದ್ದೆ ಈಗ ಮತ್ತೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಶಾಸಕನಾಗಿದ್ದೇನೆ, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜನತೆಗೆ ವಿಶೇಷ ಯೋಜನೆಗಳನ್ನು ರೂಪಿಸುವಲ್ಲಿ ಪ್ರಾವಿಣ್ಯತೆಯನ್ನು ಹೊಂದಿದ್ದಾರೆ ಅದೇ ರೀತಿ ಎಚ್ ಸಿ ಮಹದೇವಪ್ಪರವರು ಹಾಗೂ ಡಿಕೆ ಶಿವಕುಮಾರ್ ರವರ ಜೊತೆ ಸೇರಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು ಈಗ ಈ ಯೋಜನೆ ಅನುಷ್ಠಾನಗೊಂಡು ಯಶಸ್ವಿಯಾಗಿ ಸದುಪಯೋಗವಾಗುತ್ತಿದೆ, ಆದ್ದರಿಂದ ಗ್ಯಾರಂಟಿ ಯೋಜನೆ ಜನರಿಗೆ ತಲುಪುತ್ತಿದೆಯಾ ಎಂಬುದರ ಕುರಿತು ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿ ಜನರ ಸಮ್ಮುಖದಲ್ಲಿ ಸಂವಾದ ಕಾರ್ಯಕ್ರಮ ದಲ್ಲಿ ಬಾಗಿಯಾಗಿ ಜನರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವಂತ ಕಾರ್ಯವನ್ನು ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ 35 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಹಾಗೂ ಚಿಕ್ಕ ತಾಲ್ಲೂಕು ಯಳಂದೂರಿನಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ದೊರೆತಿದೆ, ಕೊಳ್ಳೇಗಾಲದಲ್ಲಿಯೂ ಕೂಡ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತು ಮಾಡಲಾಗಿದೆ ಸದ್ಯದಲ್ಲಿಯೇ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಚಂದ್ರು , ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ರಾಜೇಂದ್ರ ಕುಂತೂರು ಮೋಳೆ, ತಾಲ್ಲೂಕು ಪಂಚಾಯತ್ ಇ ಒ ಗುರುಶಾಂತಪ್ಪ ಬೆಳ್ಳುಂಡಗಿ, ಚೆಸ್ಕಾಂ ಅಧಿಕಾರಿ ರಾಜು, ನಗರಸಭೆ ಅಧ್ಯಕ್ಷೆ ರೇಖಾ ಸದಸ್ಯರಾದ ಶಾಂತರಾಜು, ಮಂಜುನಾಥ್ ಹಾಗೂ ಇನ್ನಿತರರು ಇದ್ದರು.

ವರದಿ: ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!