ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನುರಾಧಾ ಹೆಚ್ ಹೂಗಾರ ನೇಮಕ

ಕಲಬುರಗಿ: ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿ ವತಿಯಿಂದ ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ಶ್ರೀಮತಿ ಅನುರಾಧ ಎಚ್.ಹೂಗಾರ ಅವರನ್ನು ನೇಮಕ‌ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷೆ ಶ್ರೀಮತಿ ಜಗದೇವಿ ಆರ್.ಹೆಗಡೆ ಅವರು ತಿಳಿಸಿದ್ದಾರೆ.
ನವೆಂಬರ್ 04 ರಂದು ನಡೆದ ಸಭೆಯಲ್ಲಿ ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷೆ ಶ್ರೀಮತಿ ಜಗದೇವಿ ಆರ್. ಹೆಗಡೆ ರವರ ನೇತೃತ್ವದಲ್ಲಿ ನಡೆದ ಜಿಲ್ಲಾ/ತಾಲೂಕಾ ಸಮಿತಿಯ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಶ್ರೀಮತಿ ಅನುರಾಧಾ ಹೆಚ್.ಹೂಗಾರ ಅವರನ್ನು ನೇಮಕ ಮಾಡಲಾಗಿದೆ ಎಂದರು.
ನಿಯಮನುಸಾರವಾಗಿ ಜಿಲ್ಲೆಯಲ್ಲಿ ಎಲ್ಲಾ ಮಹಿಳೆಯರ ಮೇಲೆ ನಡೆಯುವ ಅನ್ಯಾಯ ಅತ್ಯಾಚಾರ, ಶೋಷಣೆ, ದೌರ್ಜನ್ಯಗಳ ವಿರುದ್ಧದ ಹೊರಾಟದ ಮುಖಾಂತರ ನ್ಯಾಯ ದೊರಕಿಸಿ ಕೊಡಬೇಕು ಮತ್ತು ಸಂಘಟನೆಯನ್ನು ಜಿಲ್ಲಾ ಮಟ್ಟದಲ್ಲಿ ಬಲಿಷ್ಠಗೊಳಿಸಿ, ಜಿಲ್ಲೆಯ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇಂದಿನಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷರಾದ ಸುಂದರ ಡಿ ಸಾಗರ, ಭೀಮಶಾ ಧರಣಿ ಮತ್ತು ಲಕ್ಷ್ಮೀ ಕವಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!