ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಕೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೂಡಲೇ ಸ್ತ್ರೀರೋಗ, ಪ್ರಸೂತಿ ತಜ್ಞರು ಸೇರಿದಂತೆ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ, ಪಟ್ಟಣದ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ವಸಂತರಾಜ ಕಹಳೆ ಮಾತನಾಡಿ, ತಾಲ್ಲೂಕಿನ ಸುತ್ತ ಮುತ್ತಲ ಗ್ರಾಮಗಳಿಗೆ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರವು ಅನುಕೂಲವಾಗಿತ್ತು. ಆದರೆ, ಇತ್ತೀಚೆಗೆ ಬಾಣಂತಿ ಮತ್ತು ನವಜಾತ ಶಿಶುವಿನ ಮರಣದ ನಂತರ ಇಲ್ಲಿನ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರನ್ನು ಬೇರೆಡಗೆ ವರ್ಗಾವಣೆ ಮಾಡಿದ ಮೇಲೆ ಇಲ್ಲಿನ ಆಸ್ಪತ್ರೆಗೆ ಸಕಾಲದಲ್ಲಿ ತಜ್ಞ ವೈದ್ಯರು ಲಭ್ಯವಿಲ್ಲದಿರುವುದರಿಂದ ಹೆರಿಗೆಯೂ ಸೇರಿದಂತೆ ರೋಗಿಗಳಿಗೆ ತೀವ್ರವಾದ ತೊಂದರೆಯಾಗಿದೆ.
ಇದರ ಜೊತೆಗೆ ಬಹುತೇಕ ಕೃಷಿ ಆಧಾರಿತ ಕಾರ್ಮಿಕರೇ ಅಧಿಕವಾಗಿರುವುದರಿಂದ ಹಾವು, ಚೇಳು ಸೇರಿದಂತೆ ವಿಷಕಾರಿ ಜಂತುಗಳ ಕಡಿತದಿಂದ ಸಮುದಾತ ಆರೋಗ್ಯ ಕೇಂದ್ರಕ್ಕೆ ಆಗಮಿಸುವ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದ್ದು, ದೂರದ ಬಳ್ಳಾರಿ ಹಾಗೂ ಗಂಗಾವತಿಗೆ ಶಿಫಾರಸ್ಸು ಮಾಡುತ್ತಿದ್ದು, ಬಡ, ಮಧ್ಯಮ ವರ್ಗದ ಜನರಿಗೆ ತೊಂದರೆಯಾಗಿದ.
ನುರಿತ ವೈದ್ಯರಿಲ್ಲದ ಕಾರಣ ಕೂಲಿಕಾರ್ಮಿಕರಿಗೆ, ಬಡವರಿಗೆ ವಿಶೇಷ ಗರ್ಭಿಣಿ ಸ್ತ್ರೀರೋಗ ತುಂಬಾ ಆನಾನೂಕುಲವಾಗಿದೆ. ಹೆರಿಗೆ ಅಪಘಾತಗಳಂತಹ ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡುವವರಿಲ್ಲದೆ ಗರ್ಭಿಣಿಯರು, ಗಾಯಾಳುಗಳು ಮಾರ್ಗಮಧ್ಯೆಯೇ ಸಾವನ್ನಪ್ಪುವಂತೆ ದುಸ್ಥಿತಿ ಬಂದಿದ್ದು, ಕೂಡಲೇ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀರೋಗ, ಪ್ರಸೂತಿ ತಜ್ಞರು ಸೇರಿದಂತೆ ನುರಿತ ವೈದ್ಯರನ್ನು ಮತ್ತು ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ತಾಲ್ಲೂಕಿನ ಆರೋಗ್ಯ ಇಲಾಖೆಯ ಸಮಸ್ಯೆಯನ್ನು ಕುರಿತು ಜಿಲ್ಲಾಧಿಕಾರಿಳಿಗೆ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿದ್ದು, ಶೀಘ್ರದಲ್ಲಿ ಈ ಬಗ್ಗೆ ಸೂಕ್ತಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಂತರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಪ್ರಭಾರಿ ವೈದ್ಯಾಧಿಕಾರಿ ಡಾ.ಅರುಣ್ ಅವರಿಗೂ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಿ.ಬಸವರಾಜ, ಕಂಪ್ಲಿ ಅಭಿವೃದ್ದಿಗಾಗಿ ಯುವ ನರ ವೇದಿಕೆಯ ರವಿ ಮಣ್ಣೂರು, ಕರ್ನಾಟಕ ರಾಜ್ಯ ಡಾ.ಭೀಮರಾವ್ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಹುಸೇನಪ್ಪ, ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಕೆ.ಲಕ್ಷ್ಮಣ, ಕಿಸಾನ್ ಜಾಗೃತಿ ಸಮಿತಿಯ ಪಿ.ಯುಗಂಧರನಾಯ್ಡು, ಸಣಾಪುರ ಮರಿಯಪ್ಪ, ದುರ್ಗಪ್ಪ, ಮುತ್ತಣ್ಣ, ಧನಂಜಯ, ರಾಮಪ್ಪ, ರುದ್ರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!