ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ವೈದ್ಯರ ಅಸೋಸಿಯೇಷನ್ ಬೆಳ್ಳಿ ಹಬ್ಬ ಆಚರಣೆ

ತೀರ್ಥಹಳ್ಳಿ ವೈದ್ಯರ ಅಸೋಸಿಯೇಷನ್ ನಿಂದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ಮುಖ್ಯವಾಗಿ ರಕ್ತದಾನ, ಆಶಾ ಕಾರ್ಯಕರ್ತೆಯರಿಗೆ, ಪೊಲೀಸ್ ಇಲಾಖೆಯವರಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ನುರಿತ ವೈದ್ಯರಿಂದ ತುರ್ತು ಪರಿಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ತರಬೇತಿ ನೀಡಲಾಯಿತು. ಹಾಗೂ ಮುಖ್ಯ ಅತಿಥಿಗಳಾಗಿ ಹೃದ್ರೋಗ ತಜ್ಞ ಹಾಗೂ ಹಾಲಿ ಲೋಕಸಭಾ ಸದಸ್ಯ ಡಾ. ಮಂಜುನಾಥ್ ಹಾಗೂ ನುರಿತ ನ್ಯುರೋಲಜಿ ತಜ್ಞಡಾ.ಜಿ ಕೆ ವೆಂಕಟೇಶ್ ರವರು ಭಾಗವಹಿಸಿದರು. ಡಾ. ಮಂಜುನಾಥ್ ರವರು ಮಾತನಾಡಿ ಆಧುನಿಕ ಜೀವನ ಶೈಲಿ ಹಾಗೂ ಹೃದಯ ಕುರಿತು ಉಪನ್ಯಾಸ ನೀಡಿದರು. ಡಾ. ಮಂಜುನಾಥ್ ಮಾತನಾಡಿ ನಮ್ಮ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ಹೃದಯವನ್ನು ಹೇಗೆ ಆರೋಗ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಸವಿಸ್ತಾರವಾಗಿ ಜನರಿಗೆ ಮನ ಮುಟ್ಟುವಂತೆ ಮಾತನಾಡಿದರು. ಡಾ. ಜಿ ಕೆ ವೆಂಕಟೇಶ್ ಮಾತನಾಡಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಸಲಹೆ ನೀಡಿದರು ಹಾಗೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಹಾಗೂ ಡಾ. ಮಂಜುನಾಥ್ ಗೌಡರವರು ಮಾತನಾಡಿ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ವೈದ್ಯರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

ವರದಿ : ಪ್ರಸಾದ್ ಹೆಚ್. ಬಿ., ತೀರ್ಥಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!