ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಕನಕದಾಸ ಜಯಂತಿ

ಕನಕ ಕಾರ್ಮಿಕ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ ಅವರ ನೇತೃತ್ವದಲ್ಲಿ ಬೆಂಗಳೂರು ನಗರದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ ಕನಕ ಕಾರ್ಮಿಕ ಕಲ್ಯಾಣ ಸಂಘದ ಕಾರ್ಯಕರ್ತರು.

ಬೆಂಗಳೂರು ನಗರದಲ್ಲಿ ಶ್ರೀ ಕನಕ ಕಾರ್ಮಿಕ ಕಲ್ಯಾಣ ಸಂಘದ ವತಿಯಿಂದ 538ನೆಯ ಭಕ್ತ ಕನಕದಾಸರ ಜಯಂತಿಯನ್ನು ಶ್ರೀ ಕನಕ ಕಾರ್ಮಿಕ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ. ಪೂಜಾರಿ ಬಿಳವಾರ ನೇತೃತ್ವದಲ್ಲಿ ಬೆಂಗಳೂರು ನಗರದ ಮಾಚೋಹಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಕನಕ ಕಾರ್ಮಿಕ ಕಲ್ಯಾಣ ಸಂಘದ ಕಾರ್ಯಕರ್ತರು ಹಾಗೂ ಭಕ್ತ ಕನಕದಾಸರ ಅನುಯಾಯಿಗಳು ಸಾಮೂಹಿಕವಾಗಿ ಭಾಗವಹಿಸಿದ್ದರು ಅದೇ ರೀತಿಯಾಗಿ ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆಯೊಂದಿಗೆ ಬೈಕ್ ಸವಾರಿಯ ಮುಖಾಂತರ ಗೋವಿಂದ್ ರಾಜ್ ನಗರದ ಶ್ರೀ ಕನಕಗಿರಿ ಪಾರ್ಕಿನಲ್ಲಿ ಭಕ್ತ ಕನಕದಾಸರ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು ಅಲ್ಲದೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಾಜ್ಯಾಧ್ಯಕ್ಷರಾದ ಶ್ರೀಮತಿ ನಾಗಲಕ್ಷ್ಮಿ ಮೇಡಂ ಅವರಿಗೆ ಕನಕ ಕಾರ್ಮಿಕ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ ಅವರು ಅಭಿನಂದನೆ ಸಲ್ಲಿಸಿದರು.
ಅದೇ ರೀತಿಯಾಗಿ ಬೆಂಗಳೂರು ನಗರದ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಆಟೋ ಚಾಲಕರ ಸಂಘದವರು ಈ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಭಾಗವಹಿಸಿದ್ದರು.
ಅದೇ ರೀತಿಯಾಗಿ ಚಂದ್ರಲೇಔಟ್ ನ ಶ್ರೀ ಕನಕ ಭವನದಲ್ಲಿರುವ ಭಕ್ತ ಕನಕದಾಸರ ಪುತ್ತಳಿಗೆ ಅಭಿನಂದನೆ ಸಲ್ಲಿಸಿ ಪುಷ್ಪಾರ್ಚನೆಯನ್ನು ಸಲ್ಲಿಸಿದರು ಹಾಗೂ ಕಾಮತ್ ಬಡಾವಣೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತ ಕನಕದಾಸರ ಜಯಂತಿಯ ಪ್ರಯುಕ್ತವಾಗಿ ಡೊಳ್ಳಿನ ಮೇಳದವರು ವಿಶೇಷವಾದ ಗಮನ ಸೆಳೆದರು ಎಂದು ಕನಕ ಕಾರ್ಮಿಕ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!