ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿ. ಎಸ್. ಎಸ್. (ಅಂಬೇಡ್ಕರ್ ವಾದ) ಸಂಘಟನೆಯ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ

ಬೀದರ್/ ಬಸವಕಲ್ಯಾಣ: ದಿ. 10/11/2025 ರಂದು ಬಸವಕಲ್ಯಾಣ ತಾಲೂಕಿನ D.S.S (ಅಂಬೇಡ್ಕರವಾದ) ತಾಲೂಕಿನ ಅಧ್ಯಕ್ಷರಾದ ಮಾಹಾದೇವ M ಗಾಯಕವಾಡ ರವರಿಂದ ಹಾಗೂ ಸಂಘಟನೆಯ ವತಿಯಿಂದ ತಹಶೀಲ್ದಾರವರಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಕೆಳಗಿನ ಹಕ್ಕೊತ್ತಾಯಗಳು ಮನವಿ ಪತ್ರ ಸಲ್ಲಿಸಲಾಯಿತು.

1) ಮಾನ್ಯ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಯವರಿಗೆ ಕರೆಮಾಡಿ ಅಶ್ಲೀಲ ಪದ ಬಳಸಿ ಹಾಗೂ ಜೀವ ಬೆದರಿಕೆ ಹಾಕಿದವರನ್ನು ಕಾನೂನು ಪ್ರಕಾರ ಜೀವ ಶಿಕ್ಷೆಗೆ ಗುರಿ ಪಡೆಸಬೇಕು.

2) ಉದ್ದೇಶಪೂರ್ವಕವಾಗಿ ಚಿತ್ತಾಪುರವನ್ನು ಗುರಿಯಾಗಿ ಇಟ್ಟುಕೊಂಡು ಪಥಸಂಚಲನ ಮಾಡಲು ಹೂರಟ ಆರ್ ಎಸ್ ಎಸ್ ಸರಕಾರದ ಷರತ್ತು ಬದ್ದ ನಿಯಮ ಮೀರಿ ಕಾರ್ಯಕ್ರಮ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕು.

3) ಸುಪ್ರೀಮ್ ಕೋರ್ಟ್ ಮುಖ್ಯನ್ಯಾಯಾಧೀಶರಾದ ಬಿ ಆರ್ ಗವಾಯಿ ರವರ ಮೇಲೆ ಶೂ ಎಸೆದ ವಕೀಲನನ್ನು ಬಂದಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು.

4) ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಹೆಸರು ಇಡಬೇಕೆಂದು ಈಗಾಗಲೇ ಸುಮಾರು 35 ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ಹೋರಾಟ ಮಾಡುತ್ತಾ ಬಂದಿದ್ದು ಇತ್ತೀಚಿಗೆ ಸರ್ಕಾರ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಮಹಾನ್ ನಾಯಕರ ಹೆಸರು ಇಡಲು ನಿರ್ಧರಿಸಿದ್ದು ಇದು ಸ್ವಾಗತಾರ್ಹ. ಆದ್ದರಿಂದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಹೆಸರು ಇಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಮುಖಂಡರಾದ ಮನೋಹರ್ ಮೈಸೆ, ಸಚಿನ್ ಬಸನಾಳೆ, ಶೋಭಾ ಸೂರ್ಯವಂಶಿ, ಇಂದುಮತಿ ಬಸನಾಳೆ ಹಾಗೂ ಇತರೆ ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!