ಬಳ್ಳಾರಿ/ ಕಂಪ್ಲಿ : ಪಟ್ಟಣದ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳಿ ಅವರಿಂದ ಶ್ರೀ ಅಕ್ಕಮಹಾದೇವಿ ಅನುಭವ ಮಂಟಪಕ್ಕೆ ಕಳೆದ ತಿಂಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಹಾಯಧನ ಕೋರಿ ಮನವಿಯನ್ನು ಪೂಜ್ಯರಿಗೆ ನೀಡಿದ್ದು ಕ್ಷೇತ್ರದಿಂದ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಅನುಭವ ಮಂಟಪಕ್ಕೆ ಪೂಜ್ಯರು 2 ಲಕ್ಷ ಹಣ ಮಂಜೂರಾತಿ ಆಗಿದೆ.
ಇಂದು ಬಳ್ಳಾರಿ ಜಿಲ್ಲಾ ನಿರ್ದೇಶಕರಾದ ರೋಹಿತಾಕ್ಷ ಶ್ರೀ ಅಕ್ಕಮಹಾದೇವಿ ಅನುಭವ ಮಂಟಪವನ್ನು ಭೇಟಿ ಮಾಡಿ ಪೂಜ್ಯರು ಮಂಜೂರಾತಿ ಮಾಡಿರುವ 2 ಲಕ್ಷ ರೂಪಾಯಿ ಮೊತ್ತದ ಡಿ. ಡಿ. ಯನ್ನು ಅಕ್ಕನ ಬಳಗದ ಸರ್ವಸದಸ್ಯರ ಉಪಸ್ಥಿತಿಯಲ್ಲಿ ವಿತರಣೆ ಮಾಡಿ ಶುಭ ಹಾರೈಸಿ ಮಾತನಾಡಿ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯವಾಗಿದ್ದು, ಕರ್ನಾಟಕ ರಾಜ್ಯಾದ್ಯಂತ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಭಾವ ಹಾಗೂ ಆಧ್ಯಾತ್ಮಿಕ ಹೆಚ್ಚಿಸಲು ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದೆ. ಇಲ್ಲಿಯವರೆಗೂ ಕಂಪ್ಲಿ ತಾಲೂಕಿನಲ್ಲಿ ಸುಮಾರು 25 ರಿಂದ 30 ದೇವಸ್ಥಾನಗಳ ಅಭಿವೃದ್ಧಿಗೆ ಶ್ರಮಿಸಿದೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಸ್ವಚ್ಛ ಪರಿಸರ ಕಾಪಾಡಿದ ಹೆಗ್ಗಳಿಕೆಯನ್ನು ಹೊಂದಿದ್ದು ಅದರಂತೆ ನಮ್ಮ ಕರ್ನಾಟಕ ರಾಜ್ಯದ ಉಳಿದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನುಷ್ಠಾನವಾಗುವ ಯೋಜನೆ ರೂಪಿಸಿಕೊಂಡಿದೆ. ಇದರ ಜೊತೆಗೆ ಪ್ರತಿ ವರ್ಷಕ್ಕೆ ಎರಡು ಬಾರಿ ತಾಲೂಕಿನಲ್ಲಿರುವ ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಸಿ ದೇವಸ್ಥಾನಗಳಲ್ಲಿ ಕಸ ವಿಲೇವಾರಿಗೆ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಂಪ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ರಾಘವೇಂದ, ಪ್ರಮುಖರಾದ ಡಾ.ಜಗನ್ನಾಥ ಹಿರೇಮಠ, ಕೃಷಿ ಅಧಿಕಾರಿ ಸಂಜುಕುಮಾರ್, ವಲಯದ ಮೇಲ್ವಿಚಾರಕ ಮಂಜುನಾಥ ಸೇರಿದಂತೆ ವಿವಿಧ ಒಕ್ಕೂಟದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು,ಹಾಗೂ ಅಕ್ಕಮಹಾದೇವಿ ಮಹಿಳಾ ಮಂಡಳಿ ಸರ್ವ ಸದಸ್ಯರು, ವಲಯದ ಸರ್ವ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















