ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಮಡ್ಡಿಮನಿ ಅವರು ಜಿ. ಪಂ. ಮುಖ್ಯ ಕಾರ್ಯನಿರ್ವಾಹಕರಿಗೆ ಪತ್ರ ಬರೆದಿದ್ದಾರೆ. 15ನೇ ಹಣಕಾಸಿನ ಯೋಜನೆ ಅಡಿ 4 ಕಾಮಗಾರಿಗಳ ಹಣವನ್ನು ದುರುಪಯೋಗ ಮಾಡಿದ್ದು ಕಂಡು ಬಂದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ



















