ಬಾಗಲಕೋಟೆ : ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಷಯದ ಉಪನ್ಯಾಸಕರಾದ ಸಂತೋಷ ಮಲ್ಲಪ್ಪ ಗಾಣಿಗೇರ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ ಮಾಡಿದೆ. ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸುರೇಶ ಕೆ. ಸಿ. ಅವರ ಮಾರ್ಗದರ್ಶನದಲ್ಲಿ ಅವರು ‘ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟು ಮತ್ತು ಸಮಾಲೋಚನೆ: ವಿಶೇಷವಾಗಿ 2000 ದಿಂದ 2020 ರ ವರೆಗಿನ ಅಧ್ಯಯನ” ಎಂಬ ಶೀರ್ಷಿಕೆಯಡಿ ತಮ್ಮ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು.
ಸಂತೋಷ ಅವರ ಈ ಸಾಧನೆಗೆ ಕುಟುಂಬದ ಸದಸ್ಯರು, ಬಂಧುಮಿತ್ರರು ಹಾಗೂ ಗ್ರಾಮಸ್ಥರು ಅಪಾರ ಸಂತೋಷ ಮತ್ತು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















