ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೋಡ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಕಾಳಗಿ: ತಾಲೂಕಿನ ಕೋಡ್ಲಿ ಗ್ರಾಮದ ಹೊರ ವಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸೋಮವಾರ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿ ವಿವಿಧ ತರಗತಿಗಳಿಗೆ ತೆರಳಿ ವಿದ್ಯಾರ್ಥಿನಿಯರೊಂದಿಗೆ ಊಟೋಪಚಾರ, ಅಭ್ಯಾಸದ ಬಗ್ಗೆ ಚರ್ಚೆಸಿದರು. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು ಈ ಬಾರಿ ಉತ್ತಮ ಫಲಿತಾಂಶ ತರಲು ಶಿಕ್ಷಕರು ಅವಿರತವಾಗಿ ಶ್ರಮಿಸಬೇಕು ಮತ್ತು ಮಕ್ಕಳಿಗೆ ಅಭ್ಯಾಸಕ್ಕೆ ಪೂರಕವಾದ ಎಲ್ಲಾ ವ್ಯವಸ್ಥೆ ಕೈಗಳುವಂತೆ ಕಿವಿಮಾತು ಹೇಳಿದರು.ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಮೊದಲು ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಆ ದಿಶೆಯಲ್ಲಿ ಅವಿರತ ಪ್ರಯತ್ನ ಮುಖ್ಯ. ಆರೋಗ್ಯದ ಕಡೆ ಕೂಡ ಗಮನ ಹರಿಸಬೇಕೆಂದು ಎಸ್ ಎಲ್ ಸಿ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.ನಂತರ ಶಾಲಾ ಮುಂಭಾಗದಲ್ಲಿ ಸಸಿ ನೆಟ್ಟರು. ಕಾಳಗಿ ತಹಸಿಲ್ದಾರ್ ಪೃಥ್ವಿರಾಜ್ ಪಾಟೀಲ್, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ, ಉಪ ತಹಸೀಲ್ದಾರ್ ರವಿಕುಮಾರ್, ಕಂದಾಯ ನಿರೀಕ್ಷಕರು ಬಸವಣ್ಣಪ್ಪ ಹೂಗಾರ್, ಅನಿಲ್ ಜಮಾದಾರ್,ರಟಕಲ್ ಪಿ ಎಸ್ ಐ ಶಿಲಾದೇವಿ, ವಸತಿ ಶಾಲೆಯ ಪ್ರಾಂಶುಪಾಲ ಡಾ. ರಾಜಶೇಖರ್ ಮಾಂಗ್, ವಾರ್ಡನ್ ಶಿವಕುಮಾರ್ ಹಿರೇಮಠ ಶಿವಾನಂದ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!