ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಹೃದಯ, ನರ, ಕ್ಯಾನ್ಸರ್ ಸಂತ್ರಸ್ತರಿಗೆ ತಜ್ಞರಿಂದ ತಪಾಸಣೆ”

ಯಾದಗಿರಿ/ಗುರುಮಠಕಲ್: ನ. 17 ಸರಕಾರಿ ನೌಕರರ ಸಂಘ ಹಾಗೂ ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ಶಿಬಿರ ತಪಾಸಣಾ ಶಿಬಿರ ಜರುಗಿತು.

ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ ಎನ್ನುವ ಸರಕಾರದ ಯೋಜನೆ ಲಾಭ ಪಡೆಯಿರಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ನಿಯಮಿತವಾಗಿ ತಪಾಸಣೆಗೆ ಒಳಗಾಗುವುದರಿಂದ ಮುಂಬರುವ ಖಾಯಿಲೆಗಳ ವಿರುದ್ದ ಮುಂಜಾಗ್ರತೆ ವಹಿಸಬಹುದು, ಯೋಗ, ವ್ಯಾಯಾಮ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಮಹೇಶ್ ಬಿರಾದಾರ ತಿಳಿಸಿದರು.

ತದ ನಂತರ ಮಾತನಾಡಿದ ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ ನೀರೆಟಿ ನೌಕರರ ಸಂಘ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಭಾಗದ ಬಡತನ ರೇಖೆಗಿಂತ ಕಡಿಮೆ ಇರುವ ಎಲ್ಲರಿಗೂ ಸರಕಾರದ ಯೋಜನೆಗಳಾದ ಆಯುಷ್ಮಾನ ಭಾರತ, ಆರೋಗ್ಯ ಕರ್ನಾಟಕ ಅಡಿಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ನೀಡಲಾಗುವದು ಕಳೆದ ವರ್ಷ ಆಯೋಜಿಸಿದ್ದ ಶಿಬಿರದಲ್ಲಿ 258 ಜನ ತಪಾಸಣೆಗೆ ಒಳಪಟ್ಟು ಯಶಸ್ವಿಯಾಗಿ 12 ಜನ ಉಚಿತ ಶಸ್ತ್ರಚಿಕಿತ್ಸೆ ಪಡೆದಿದ್ದಾರೆ, ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ್ ಸಜ್ಜನ ಮಾತನಾಡಿ ಬೆಂಗಳೂರಿನ ಪ್ರತಿಷ್ಠಿತ ವೈದೇಹಿ ಆಸ್ಪತ್ರೆ ಸರಕಾರದ ಸಹಯೋಗದಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಹೃದ್ರೋಗ, ನರ ರೋಗ, ಮೂತ್ರ ಪಿಂಡ, ಸುಟ್ಟ ಗಾಯ, ಕ್ಯಾನ್ಸರ್ ನಂತಹ ಮಹಾಮರಿ ರೋಗಗಳಿಗೂ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತಿದೆ ಎಂದು ಹೇಳಿದರು.

ಶಿಬಿರದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಉಚಿತ ಎಕೋ, ಇ.ಸಿ.ಜಿ, ಬಿಪಿ ಮತ್ತು ಶುಗರ್ ತಪಾಸಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಹನಮಂತ ರೆಡ್ಡಿ, ವೈದೇಹಿ ಆಸ್ಪತ್ರೆಯ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭಾಗಿಯಾದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!