ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಛಟ್ಟಿ ಅಮಾವಾಸ್ಯೆ (ಕೊನೆಯ ಕಾರ್ತಿಕ) ಯ ಪ್ರಯುಕ್ತ ಸಣಾಪುರದ ಉದ್ಬವ ವೀರಭದ್ರೇಶ್ವರಿನಿಗೆ ವಿಶೇಷ ಪೂಜೆ

ಲ್

ಬಳ್ಳಾರಿ / ಕಂಪ್ಲಿ: ಛಟ್ಟಿ ಅಮಾವಾಸ್ಯೆ (ಕೊನೆಯ ಕಾರ್ತಿಕ) ಯ ಪ್ರಯುಕ್ತ ತಾಲ್ಲೂಕಿನ ಸಣಾಪುರ ಗ್ರಾಮದ ಉದ್ಬವ ವೀರಭದ್ರೇಶ್ವರ ಸ್ವಾಮಿಗೆ ವಿವಿಧ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಕ್ತರಿಂದ ದೀಪ ಹಚ್ಚುವುದು, ಅನ್ನ ಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಬೆಳಿಗ್ಗೆ ಉದ್ಬವ ವೀರಭದ್ರೇಶ್ವರನ ಉದ್ಬವ ಶಿಲಾಮೂರ್ತಿಗೆ ಪಂಚಾಮೃತ, ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳು, ಜರುಗಿದವು. ನಂತರ ಸ್ವಾಮಿಗೆ ಚಿನ್ನ, ಬೆಳ್ಳಿ ಆಭರಣಗಳಿಂದ, ಹಾಗೂ ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ನಡೆಸಿದರು.
ತಾಲ್ಲೂಕು ಸೇರಿದಂತೆ ಜಿಲ್ಲೆ, ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸ್ವಾಮಿಯ ಸಕಲ ಸದ್ಭಕ್ತರು ದೇವಸ್ಥಾನದ ಆವರಣದಲ್ಲಿ ತಮ್ಮ ಹರಕೆಯಂತೆ ದೀಪಗಳನ್ನು ಬೆಳಗಿದರು. ಅಮಾವಾಸ್ಯೆಯ ಪ್ರಯುಕ್ತ ದೇವಸ್ತಾನದಲ್ಲಿ ಪುಷ್ಪ ಕಾಗಲ್ಕರ್ ಕುಟುಂಬದವರು ಅನ್ನ ಸಂತರ್ಪಣೆಯನ್ನು ಏರ್ಪಡಿಸಿದ್ದರು.
ಇಂದಿನ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಯುವಕ ಸಂಘದ ಪದಾಧಿಕರಿಗಳು ಸದ್ಭಕ್ತರು ಭಾಗವಹಿಸಿದ್ದರು. ಸಂಜೆ ದೇವಸ್ಥಾನದ ಪ್ರಾಂಗಣದಲ್ಲಿ ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಇಟ್ಟು ಕಿರು ರಥೋತ್ಸವವನ್ನು ನಡೆಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!