ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಕಚೇರಿ ಉದ್ಘಾಟನೆ

ಹುನಗುಂದ: ತಾಲ್ಲೂಕಿನ ನಾಗೂರು ಗ್ರಾಮದ ಚನ್ನಮ್ಮ ವೃತ್ತದ ಹತ್ತಿರವಿರುವ ಅಭಿನವ ಶ್ರೀ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ ಸಮಾರಂಭ ನ. 21 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ನೂತನ ಅಭಿನವ ಶ್ರೀ ಸಹಕಾರಿ ಸಂಘದ ಕಚೇರಿಯನ್ನು ಹಾಲಿಕೆರೆ- ಗಂಜಿಹಾಳದ ಜಗದ್ಗುರು ಮುಪ್ಪಿನ ಬಸವಲಿಂಗ ಸ್ವಾಮೀಜಿ ಉದ್ಘಾಟಿಸುವರು. ಅಮೀನಗಡ- ಯರಿಗೋನಾಳ ಪ್ರಭುಶಂಕರೇಶ್ವರ ಮಠದ ಶಂಕರರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು.
ಜಿಲ್ಲಾ ಸಹಕಾರಿ ಸಂಘದ ಉಪನಿಬಂಧಕ ದಾನಯ್ಯ ಹಿರೇಮಠ ಅಧ್ಯಕ್ಷತೆ ವಹಿಸುವರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಮಹದೇವ ಕಂಬಾರ ಮುಖ್ಯ ಅತಿಥಿಯಾಗಿ ಆಗಮಿಸುವರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಎಸ್. ಆರ್. ಬಾಡಗಿ, ಹುನಗುಂದ ಬಿಡಿಸಿಸಿ ಬ್ಯಾಂಕ ಹಿರಿಯ ಶಾಖಾ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಸಹಕಾರಿ ಹಿರಿಯ ನಿರೀಕ್ಷಕ ಆರ್.ಎನ್.ಗಡ್ಡಿ ಅತಿಥಿಗಳಾಗಿ ಆಗಮಿಸುವರು. ಗ್ರಾಮದ ಗುರು ಹಿರಿಯರು ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಶಿವಕುಮಾರ ಕಂದಗಲ್ಲ ಪ್ರಕಟಣೆ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!