ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆ.ಕೆ.ಆರ್.ಟಿ.ಸಿ. ಬಸ್‌

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಂಡಗಿ ಗ್ರಾಮದ ಹತ್ತಿರದ ಬಂದೇನವಾಜ ವಾಡಿ ಗ್ರಾಮದ ಹತ್ತಿರ ಬಸವಕಲ್ಯಾಣ ಘಟಕಕ್ಕೆ ಸೇರಿದ ಕೆ.ಕೆ.ಆರ್.ಟಿ.ಸಿ. ಬಸ್ ಒಂದು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವಕಲ್ಯಾಣದಿಂದ ಮುಡಬಿ ಕಡೆಗೆ ಹೋಗುತಿದ್ದ ವೇಳೆ ಬಂದೇನವಾಜ ವಾಡಿ ಹತ್ತಿರವಿರುವ ಗುಡ್ಡ ಇಳಿಯುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ನಿಂತಿದೆ. ಬಸ್ಸಿನಲ್ಲಿ ಸುಮಾರು ಜನ ಪ್ರಯಾಣಿಕರಿದ್ದು, ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ವಾಹನ ಸವಾರರು ಹಾಗೂ ಬಸ್ಸಿನವರು ತಿರುವು ರಸ್ತೆ ಇರುವ ಜಾಗದಲ್ಲಿ ಅಥವಾ ವಾಹನಗಳಿಗೆ ಸೈಡ್‌ ಹೊಡೆಯುವಾಗ ಎಚ್ಚರ ವಹಿಸಿ ಚಾಲನೆ ಮಾಡಬೇಕೆಂದು ಬಸ್ಸಿನಲ್ಲಿರುವ ಪ್ರಯಾಣಿಕರು ಚರ್ಚೆ ಮಾಡುತ್ತಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!