ಬಳ್ಳಾರಿ / ಕಂಪ್ಲಿ : ತಾಲೂಕಿನ ಚಿಕ್ಕಜಾಯಿನೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಹತ್ವ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಮನ್ವಯಾಧಿಕಾರಿ ರೇಖಾ ಎಂ. ಬಿ. ಮಾತನಾಡಿ ಶಿಕ್ಷಣ ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಸ್ಥೆಯು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಸರಿಯಾಗಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತ ಸ್ಥಾನವನ್ನು ಪಡೆಯಬೇಕು ಎಂದರು.
ಸಂಪನ್ಮೂಲ ಶಿಕ್ಷಕ ಎಸ್ ರಾಮಪ್ಪ ಮಾತನಾಡಿ ನಾವು ಜೀವನದಲ್ಲಿ ಎಷ್ಟು ಶಿಕ್ಷಣ ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯವಲ್ಲ ಆ ಶಿಕ್ಷಣ ನಮಗೆ ಎಷ್ಟು ಸಂಸ್ಕಾರವನ್ನು ಕಲಿಸಿದೆ ಎನ್ನುವುದು ಪ್ರಮುಖ ಆ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಂದೆ ತಾಯಿ ಗುರು ಹಿರಿಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯನಿ ಎಚ್. ಎಂ. ಗಾಯತ್ರಿ ದೈಹಿಕ ಶಿಕ್ಷಕ ಆನಂದ, ಒಕ್ಕೂಟದ ಅಧ್ಯಕ್ಷ ಮರಿಯಮ್ಮ, ಸೇವಾ ಪ್ರತಿನಿಧಿ ಸಂಗೀತ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















