ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸಿಬ್ಬಂದಿಯವರಿಗೆ ಸಾಕಷ್ಟು ತಾರತಮ್ಯ ಆಗುತ್ತಿರುವುದು ಕಂಡುಬಂದಿರುತ್ತದೆ. ಅದು ಹೇಗೆ ಎಂದರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಿಗೆ ಒಬ್ಬರಂತೆ ಎಸ್ ಬಿ. ಮತ್ತು ಎಂ. ಟಿ ಅಂತ ನೇಮಕ ಮಾಡಿಕೊಳ್ಳುವ ಅಧಿಕಾರ ಠಾಣಾಧಿಕಾರಿಗಳಿಗೆ ಇರುತ್ತದೆ. ಈ ಅಧಿಕಾರಿಗಳು ತಮಗೆ ಬೇಕಾದವರಿಗೆ ಹಾಗೂ ಜಾತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿರುತ್ತಾರೆ. ಇಲ್ಲಿ ದಲಿತ ಹಿಂದುಳಿದ ವರ್ಗದವರಿಗೆ ಯಾವುದೇ ಅವಕಾಶವಿರುವುದಿಲ್ಲ. ಅವಕಾಶದಿಂದ ವಂಚಿತರಾಗುತ್ತಿರುತ್ತಾರೆ. ಅದರಲ್ಲೂ ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚಾಗಿದೆ.
ಹೀಗಾಗಿ ತಾವು ಇದನ್ನು ಗಂಭೀರವಾಗಿ ಪರಿಗಣಿಸಿ ಜಾತಿ ತಾರತಮ್ಯವನ್ನು ಮಾನ್ಯ ಗೃಹ ಸಚಿವರು ಕರ್ನಾಟಕ ಸರ್ಕಾರ ಇವರು ಮಧ್ಯಪ್ರವೇಶಿಸಿ ತಾರತಮ್ಯವನ್ನು ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶ ಕೊಡಿಸಬೇಕೆಂದು ಇಂಡಿ
ಡಿಎಸ್ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕರಾದ ಶ್ರೀ ಲೋಹಿತಕುಮಾರ ರೂಗಿ ಅವರು ಒತ್ತಾಯಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















