ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕರಾದ ರಾಜು ಕಾಗೆಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಕಾಗವಾಡದ ಪ್ರವಾಸಿ ಮಂದಿರದಲ್ಲಿ ಕಾಗವಾಡದ ಜನಪ್ರಿಯ ಶಾಸಕರಾದ ರಾಜು ಕಾಗೆ ಅವರ ನೇತೃತ್ವದಲ್ಲಿ ಜರುಗಿತು.

ಕಾಗವಾಡದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಇಂದು ಸೌಹಾರ್ದಪೂರ್ಣ ವಾತಾವರಣದಲ್ಲಿ ಜರುಗಿತು.

ಸಭೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ವಿಭಾಗದ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರು ಸನ್ಮಾನ್ಯ ಶ್ರೀ ರಾಜು ಕಾಗೆಯವರು ವಹಿಸಿಕೊಂಡಿದ್ದರು, ಶಾಸಕರು ಪ್ರತಿ ವಿಭಾಗದ ಕಾರ್ಯೋನ್ನತಿ ಕುರಿತು ವಿವರವಾಗಿ ಪರಿಶೀಲನೆ ನಡೆಸಿದರು. ಗ್ರಾಮೀಣ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ವಿದ್ಯುತ್ ಸರಬರಾಜು, ಕೃಷಿ ಸಹಾಯಕ ಯೋಜನೆಗಳು, ಆರೋಗ್ಯ ಸೇವೆಗಳು, ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತಂತೆ ಪ್ರತ್ಯೇಕವಾಗಿ ಪ್ರಸ್ತುತಿಗಳನ್ನು ನೀಡಲಾಯಿತು.

ಸಭೆಯಲ್ಲಿ ಕೆಲವು ಯೋಜನೆಗಳ ಅನುಷ್ಠಾನ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ, ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಜನರಿಗೆ ನೇರವಾಗಿ ಪರಿಣಾಮ ಬೀರುವ ಸಲುವಾಗಿ ತುರ್ತು ನೀರಿನ ಯೋಜನೆಗಳು, ಗ್ರಾಮಾಂತರ ರಸ್ತೆ ಮರುನಿರ್ಮಾಣ, ಕೃಷಿ ಪಂಪ್ ಲೈನ್ ಸಮಸ್ಯೆಗಳು, ಮತ್ತು ಆರೋಗ್ಯಇಲಾಖೆಯ ಕುರಿತಂತೆ ಚರ್ಚೆ ನಡೆಯಿತು.

ಇದೇ ಸಂದರ್ಭದಲ್ಲಿ ನಾಗರಿಕರಿಂದ ಬಂದಿರುವ ದೂರುಗಳು, ಸಾರ್ವಜನಿಕ ಬೇಡಿಕೆಗಳು ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಶಾಸಕರ ಗಮನಕ್ಕೆ ತರಲಾಯಿತು. ಜನರಿಗೆ ಉತ್ತಮ ಸೇವೆ ನೀಡುವಂತೆ ಇಲಾಖೆಗೆ ಸೂಚನೆ ನೀಡಲಾಯಿತು.

ಸಭೆಯ ಅಂತ್ಯದಲ್ಲಿ, ಅಭಿವೃದ್ಧಿ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ವೇಗವಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಯಿತು.

ಇದೇ ಸಭೆಯಲ್ಲಿ ಕಾಗವಾಡ ತಾಲೂಕ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಶ್ರೀ ರವೀಂದ್ರ ಹಾದಿಮನಿ, ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ವಿ ಎ ವಾಲಿ, ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಶ್ರೀ ಡಾ. ಬಸಗೌಡ ಕಾಗೆ, ಕಾಗವಾಡ ತಾಲೂಕಿನ ಪುರಸಭೆ ಅಧಿಕಾರಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು, ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!