ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನ.28ರಂದು ಕಂಪ್ಲಿಯಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ: ಪಟ್ಟಣದ ಶಾರದಾ ಶಾಲೆಯ ವಿರೇಶ್ವವ ಸಂಘದ (ಶಾರದಾ ಶಾಲೆ) ಆವರಣದಲ್ಲಿ ನ.28 ರ ಶುಕ್ರವಾರದಂದು ಕನ್ನಡ ಹಿತರಕ್ಷಕ ಸಂಘದಿಂದ ಸಂಘದ 55ನೇ ವಾರ್ಷಿಕೋತ್ಸವ ಹಾಗೂ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಂಪ್ಲಿ ಕನ್ನಡ ಹಿತರಕ್ಷಕ ಸಂಘದ ಅಧ್ಯಕ್ಷ ಬೂದುಗುಂಪಿ ಅಂಬಣ್ಣ ತಿಳಿಸಿದರು.
ಅವರು ಪಟ್ಟಣದಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಮಾನ್ಯ ಸ್ಥಳೀಯ ಶಾಸಕರಾದ ಜೆ. ಎನ್. ಗಣೇಶ ಇವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಲೂಕು ವಿರೇಶ್ವವ ಸಂಘದ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ ಇವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಾ. ಸಾ. ಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠರವರು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಜೂಗಲ್ ಮಂಜುನಾಯಕ, ಪ್ರಭಾರಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಭಾಗವಹಿಸಲಿದ್ದಾರೆ. ಸ್ಥಳೀಯ ಕಲಾವಿದರಾದ ಚಿದಾನಂದ ಗವಾಯಿ (ಸಂಗೀತ ಕ್ಷೇತ್ರ), ಎಸ್.ಪೂಜಾ (ಯೋಗ ಸಾಧಕಿ) ಇವರಿಗೆ ಸನ್ಮಾನ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಬಂಗಿ ದೊಡ್ಡ ಮಂಜುನಾಥ, ಜಂಬಕ್ಕ (ಜನಪದ ಕ್ಷೇತ್ರ), ಚನ್ನದಾಸರ ಮಾರೆಪ್ಪ (ಬಯಲಾಟ) ಇವರಿಗೆ ವಿಶೇಷ ಸನ್ಮಾನ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾ ಕಾರ್ಯದರ್ಶಿ ದ್ಯಾಮನಗೌಡ ಪಾಟೀಲ್, ಜಿಲ್ಲಾ ಕಾರ್ಯಕಾರಿ ಸಂಘದ ಸಮಿತಿ ಸದಸ್ಯ ಜಿ.ಚಂದ್ರಶೇಖರ್‌ಗೌಡ ಇವರಿಗೆ ಅಭಿನಂದನಾ ಸನ್ಮಾನ, ಕ್ರೀಡೆಯಲ್ಲಿ ಸಾಧನೆ ಮಾಡಿದ ಮದರ್ ಥರೇಸಾ ಪಿ.ಯು.ಕಾಲೇಜು ವಿದ್ಯಾರ್ಥಿನಿಯಾದ ಜ್ಯೋತಿ, ಶಾಷಾಬಿ. ಮಲ್ಲೇಶ್ವರಿ ಮತ್ತು ತಾಲೂಕು ಮಟ್ದದಲ್ಲಿ ಕನ್ನಡ ಮಾದ್ಯಮ ಶಾಲೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕು ಮಟ್ದದಲ್ಲಿ ಅಂಗ್ಲ ಮಾದ್ಯಮದಲ್ಲಿ ಕನ್ನಡ ವಿಷಯಕ್ಕೆ 100ಕ್ಕೆ 100 ಅಂಕಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ, ಕಾರ್ಯದರ್ಶಿ ಸಿ.ಯಂಕಪ್ಪ, ಖಜಾಂಚಿ ಶ್ರೀನಿವಾಸ, ಉಪ ಕಾರ್ಯದರ್ಶಿ ಕೆ.ಮೆಹಬೂಬ್, ಸದಸ್ಯ ಯಂಕಾರೆಡ್ಡಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!