ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು

ಕಲಬುರಗಿ : ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS) ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್​ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂ. ಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯ ನಿರ್ವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!