ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ವಸತಿ ನಿಲಯದಲ್ಲಿ ವಾಸವಿದ್ದು 10 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಗೆ ಇಂದು ಬೆಳಗಿನ ಜಾವ ಹೊಟ್ಟೆ ನೋವು ಕಾಣಿಸಿಕೊಂಡು ವಸತಿ ನಿಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಅಘಾತಕಾರಿ ಘಟನೆ ವರದಿಯಾಗಿದೆ, ತಾಯಿ ಮತ್ತು ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಜಿ. ಪಂ. ಸಿಇಒ ವರ್ಣಿತ್ ನೇಗಿ, ಮತ್ತು ಎಸ್. ಪಿ. ರಾಮ್ ಅರಸಿದ್ದಿ ಭೇಟಿ ನೀಡಿ ವಿಚಾರಿಸಿದ್ದಾರೆ,
ಕುಕನೂರು ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕ ಮತ್ತು ವಸತಿ ನಿಲಯದ ವಾರ್ಡನ್‌ನನ್ನು ಬಂಧಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















