ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದಲ್ಲಿ ಸಮಾನತೆಗೆ ಅವಕಾಶವಿದೆ : ಜಗದೀಶ್ ಪೂಜಾರ್

ಬಳ್ಳಾರಿ / ಕಂಪ್ಲಿ: ಮೇರಾ ಯುವ ಭಾರತ್ ಬಳ್ಳಾರಿ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಅಸೋಸಿಯೇಷನ್, ಕಣ್ವಿ ತಿಮ್ಮಲಾಪುರ ಹಾಗೂ ವಿಕಾಸ ಕೈಗಾರಿಕಾ ಶಿಕ್ಷಣ ಸಂಸ್ಥೆ ಕಂಪ್ಲಿ ಇವರ ಸಂಯುಕಾಶ್ರದಲ್ಲಿ ಇಂದು ವಿಕಾಸ್ ಐ.ಟಿ.ಐ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಸಸಿಗೆ ನೀರೆರೆಯುವುದರ ಮೂಲಕ ಸ್ವಾಮಿ ವಿವೇಕಾನಂದ ಯೂತ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪೂಜಾರ್ ಚಾಲನೆ ನೀಡಿದರು ನಂತರ ಮಾತನಾಡಿ ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದಲ್ಲಿ ಸಮಾನತೆಗೆ ಅವಕಾಶವಿದೆ. ಡಾ‌. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಸಂವಿಧಾನ ಶಿಲ್ಪಿ ಎಂದು ಬಿರುದನ್ನು ಪಡೆದವರು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ವಿಜಯ ಕರುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬಿ.ಮಂಜುಳಾ ಮಾತನಾಡಿದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಬಿ.ವೀರೇಶ ಹಾಗೂ ಸೋಮಪ್ಪ, ವಿರೇಶ ಎಮ್ಮಿಗನೂರು, ಸಿಬ್ಬಂದಿ ವೀರಭದ್ರ ಮುಂತಾದವರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!