ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಠಾಧೀಶರು ರಾಜಕಾರಣದಲ್ಲಿ ಪ್ರವೇಶ ಮಾಡುವುದು ಆರೋಗ್ಯಕರ ಬೆಳವಣಿಗೆ ಅಲ್ಲ, ಸಮಾಜವನ್ನು ಒಗ್ಗೂಡಿಸುವ ಕೆಲಸವೇ ಮಠಾಧೀಶರದ್ದು -ಶರಣಬಸವ ಶಾಸ್ತ್ರಿಗಳು

ಬಾಗಲಕೋಟೆ/ ಮುಧೋಳ :ಹಳಿ ತಪ್ಪುತ್ತಿರುವ ಸಮಾಜವನ್ನು ಧರ್ಮಬೋಧನೆಯಿಂದ ಒಗ್ಗೂಡಿಸುವ ಮಹಾ ಕಾರ್ಯವೇ ಮಠಾಧೀಶರದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪ.ಪೂ.ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ನವೆಂಬರ್ 26 ಭಾರತ ಸಂವಿಧಾನ ದಿನದ ಶುಭಾಶಯಗಳನ್ನು ಕೋರುತ್ತಾ ಮಾತನಾಡಿದ ಅವರು ಡಾ. ಬಿ.ಆರ್ .ಅಂಬೇಡ್ಕರ್ ಅವರು ಬಸವಣ್ಣನ ಇನ್ನೊಂದು ಅವತಾರವೆಂದರು. ಜಗದ್ಗುರು ಬಸವಣ್ಣನವರ ಸಂವಿಧಾನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಎಲ್ಲರನ್ನೂ ಪ್ರೀತಿಸುವುದು. ಎಲ್ಲರೂ ನನ್ನವರೆಂದು ಹೇಳಿಕೊಳ್ಳುವ ತತ್ವ ಅದರಲ್ಲಿ ಅಡಗಿದೆ. ಇವತ್ತು ಬಾಯಲ್ಲಿ ಬೆಣ್ಣೆ .ಕೈಯಲ್ಲಿ ದೊಣ್ಣೆ ಎಂಬಂತೆ ನಮ್ಮೆಲ್ಲರ ಕಾರ್ಯಗಳು ಶರಣರ ಸಂತರ ಪಂಕ್ತಿಯಲ್ಲಿ ನಡೆಯುವರು ಜಾತಿ ಮತಗಳನ್ನು ತೊರೆದು ಸಮಾಜವನ್ನು ಒಗ್ಗೂಡಿಸುವ ಕೆಲಸವೇ ನಮ್ಮ ಬದುಕಿನ ಗುರಿಯಾಗಬೇಕು. ಇಂದಿನ ರಾಜಕೀಯ ಕ್ಷೇತ್ರದಲ್ಲಿ ಅತ್ಯಂತ ಮುತ್ಸದ್ದಿ ರಾಜಕಾರಣಿಗಳಿದ್ದಾರೆ. ಹಾಗಾಗಿ ಮಠಾಧೀಶರಾದಂತವರು ರಾಜಕಾರಣದಲ್ಲಿ ಪ್ರವೇಶ ಮಾಡುವುದು ಆರೋಗ್ಯಕರ ಬೆಳವಣಿಗೆ ಅಲ್ಲ .ಇದು ಖಂಡನೀಯ ಎಂದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!