ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ವೆಂಕಟೇಶ್.

ಕೊಳ್ಳೇಗಾಲ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ಚಿಲಕವಾಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯವನ್ನು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹಾಗೂ ಕೊಳ್ಳೇಗಾಲ ಶಾಸಕ ಎ. ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು.

ವಿದ್ಯಾರ್ಥಿ ನಿಲಯ ಉದ್ಘಾಟನೆಯಲ್ಲಿ ಶಾಸಕರು ಮಾತನಾಡಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ನಿಲಯ ಸಂವಿಧಾನ ಸಮರ್ಪಣೆ ಆದ ಶುಭ ದಿವಸ ಉದ್ಘಾಟನೆಯಾಗುತ್ತಿರುವುದು ಸಂತೋಷದ ಸಂಗತಿ ಎಂದರು.

ಮಾಜಿ ಶಾಸಕ ಜಯಣ್ಣ ಅವರ ಅವಧಿಯಲ್ಲಿ ಮಂಜೂರಾದ ಪಾಲಿಟೆಕ್ನಿಕ್ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ ಪ್ರಾರಂಭವಾಗಿ ಹಳ್ಳಿಗಾಡಿನ ಮಕ್ಕಳ ವ್ಯಾಸಂಗಕ್ಕೆ ಅನುಕೂಲವಾಗಿದೆ. ಗ್ರಾಮೀಣ ಭಾಗದ ಮಕ್ಕಳು ಉಳಿದುಕೊಂಡು ವ್ಯಾಸಂಗ ಮಾಡುವುದಕ್ಕೆ ಹಾಸ್ಟೆಲ್‌ ವ್ಯವಸ್ಥೆ ಉಪಯುಕ್ತವಾಗಿದೆ ಹಾಗೂ ಜಿಲ್ಲೆಯ ಸಚಿವ ವೆಂಕಟೇಶ್ ಅನುದಾನಗಳಿಂದ ಬಿಳಿಗಿರಿ ರಂಗನ ಬೆಟ್ಟ ಹಾಗೂ ಹಲವು ಕಡೆ ಅಭಿವೃದ್ದಿ ಕೆಲಸ ನಡೆಯುತ್ತಿದೆ ಎಂದರು.

ನಮ್ಮ ಕ್ಷೇತ್ರದಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆ ಇಲಾಖೆ ಜಾಗದಲ್ಲಿ ನಿರ್ಮಾಣಕ್ಕೆ ಸಚಿವರು ಅನುಕೂಲ ಮಾಡಿ ಕೊಟ್ಟಿದ್ದಾರೆ 250 ಹಾಸಿಗೆ ಆಸ್ಪತ್ರೆ ನಿರ್ಮಾಣವಾಗುವುದರಿಂದ ಹನೂರು ಯಳಂ ದೂರು ಕಡೆಯಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಮುಡಿಗುಂಡ ಬಳಿ ನೂತನ ಸೇತುವೆ ನಿರ್ಮಾಣಕ್ಕೆ ಸಚಿವರು 15 ಕೋಟಿ ಅನುದಾನವನ್ನು ಕೊಟ್ಟಿದ್ದಾರೆ

ಆದ್ದರಿಂದ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಇನ್ನು ಹಲವಾರು ಅಭಿವೃದ್ಧಿ ಕೆಲಸಗಳು ನಮ್ಮ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಹಾಗೂ ಕೆಪಿಎಸ್ ಕಾಲೇಜು ನಿರ್ಮಾಣಕ್ಕೆ ಅನುಮೋದನೆ ದೊರೆ ತಿದ್ದು, ಅದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಬಾರಿ ಬಜೆಟ್ ನಲ್ಲಿ 50 ಕೋಟಿ ಅನುದಾನದಲ್ಲಿ ರಸ್ತೆ ಕಾಮಗಾರಿಗಳಿಗೆ ಉಪಯೋಗಿಸಿಕೊಳ್ಳಲು ಆದೇಶ ವಾಗಿತ್ತು ಆದ್ದರಿಂದ ಕ್ಷೇತ್ರ ರಸ್ತೆ ಅಭಿವೃದ್ಧಿಗೆ ಅನುದಾನ ವನ್ನು ಕೊಟ್ಟು ಕಾಮಗಾರಿಗಳು ನಡೆಯುತ್ತಿವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ ಈ ದಿನ ಭಾರತ ಸಂವಿಧಾನ ಸಮರ್ಪಣೆ ದಿನಾಚರಣೆಯನ್ನು ದೇಶದ್ಯಾಂತ ಆಚರಿಸಲಾಗುತ್ತಿದೆ. ನಾವು ಕೂಡ ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಆಚರಣೆ ಮಾಡಿ ನಿಲಯ ಉದ್ಘಾಟನೆಗೆ ಆಗಮಿಸಿ ಉದ್ಘಾಟನೆ ಮಾಡಿದ್ದೇವೆ. ಸರ್ಕಾರದ ಮಟ್ಟದಲ್ಲಿ ಹಿಂದುಳಿದ ಗಡಿ ಜಿಲ್ಲೆ ಚಾಮರಾಜನಗರವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ ಹಾಗೂ ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಅದರಲ್ಲಿ ವೃತ್ತಿಪರ ಶಿಕ್ಷಣಕ್ಕೂ ಆದ್ಯತೆ ಕೊಟ್ಟು ಕಾಲೇಜುಗಳಿಗೆ ಅನುದಾನಗಳನ್ನು ಕೊಟ್ಟು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಮೋನಾ ರೋತ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ, ಆಶಾಲತಾ ಪಿಆರ್ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್ ಕೊಳ್ಳೇಗಾಲ, ಅಶ್ವಿನಿ ಕೆ ಎಸ್ ಉಪನ್ಯಾಸಕರು ಆಯೋಗ ಸರ್ಕಾರಿ ಪಾಲಿಟೆಕ್ನಿಕ್ ಕೊಳ್ಳೇಗಾಲ, ಶ್ವೇತಾ ಉಪನ್ಯಾಸಕಿ ಸರ್ಕಾರಿ ಪಾಲಿಟೆಕ್ನಿಕ್ ಕೊಳ್ಳೇಗಾಲ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಪ್ರಸನ್ನ, ಕಾಲೇಜು ಪ್ರಾಂಶುಪಾಲ ಪಿ. ಆರ್ ಆಶಾಲತಾ ಇನ್ನಿತರರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!