ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳ ವಶ

ಬೆಳಗಾವಿ/ ಬೈಲಹೊಂಗಲ :
ದಿನಾಂಕ: ೦೨-೧೨-೨೦೨೫ ರಂದು ಬೈಲಹೊಂಗಲ ಪುರಸಭೆಯಿಂದ ಕಾರ್ಯಾಚರಣೆ ಕೈಗೊಂಡು ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಯಿತು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, ೨೦೨೧ರ ಪ್ರಕಾರ ಬೈಲಹೊಂಗಲ ಪುರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿ ಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚಗಳು, ಸ್ಟ್ರಾಗಳು, ಕ್ಲಿಂಗ್ ಪಿಲ್ಟ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತು ಥರ್ಮಾಕೋಲ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸನಿಂದ ತಯಾರಾದಂತಹ ವಸ್ತುಗಳು ಹಾಗೂ ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ದಿನಾಂಕ: ೦೧-೦೭-೨೦೨೨ ರಿಂದ ಜಾರಿಗೆ ಬರುವಂತೆ ಕಡ್ಡಾಯವಾಗಿ ಈಗಾಗಲೇ ನಿಷೇಧಿಸಿದ್ದು, ಈ ಬಗ್ಗೆ ಪಟ್ಟಣದ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಹಲವಾರು ಬಾರಿ ತಿಳುವಳಿಕೆ ಸಭೆ, ಪತ್ರಿಕಾ ಪ್ರಕಟಣೆ, ನೋಟಿಸ್ ಜಾರಿ ಹಾಗೂ ಧ್ವನಿವರ್ಧಕ ಪ್ರಚಾರದ ಮೂಲಕ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಬಳಕೆ ಮಾಡದಂತೆ ತಿಳಿಸಲಾಗಿದ್ದು, ಆದಾಗ್ಯ ಕೂಡ ಪುರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಮಾರಾಟ ಚಾಲ್ತಿಯಲ್ಲಿದ್ದು, ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವು ಪಟ್ಟಣದಲ್ಲಿನ ಒಳಚರಂಡಿ ಮತ್ತು ಗಟಾರಗಳಲ್ಲಿ ಸೇರಿ ನೀರು ಸರಾಗವಾಗಿ ಹರಿಯದೇ ಪದೇ ಪದೇ ಚರಂಡಿಗಳು ಬ್ಲಾಕ್‌ಗಳಾಗಿ ಅವುಗಳ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ತ್ಯಾಜ್ಯದ ಸಂಸ್ಕರಣೆ ಮತ್ತು ವೈಜ್ಞಾನಿಕ ವಿಲೇವಾರಿ ತೊಂದರೆಯಾಗುತ್ತಿರುವುದರಿಂದ ಪುರಸಭೆ ವ್ಯಾಪ್ತಿಯಲ್ಲಿ ಪರಿಶೀಲನೆ ಕಾರ್ಯಾಚರಣೆ ಕೈಗೊಂಡು ಅಂದಾಜು ೨೫೦ ಕೆ.ಜಿ.ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿ, ರೂ.೧೪೭೦೦/- ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ಬದಲಾಗಿ ಜೈವಿಕವಾಗಿ ವಿಘಟನೆ ಹೊಂದುವ ವಸ್ತುಗಳನ್ನು ಬಳಕೆ ಮಾಡಿ ಪರಿಸರ ಸಂರಕ್ಷಣೆಯಲ್ಲಿ ಪುರಸಭೆಯೊಂದಿಗೆ ಸಹಕರಿಸಲು ತಿಳುವಳಿಕೆ ನೀಡಲಾಯಿತು.

ವರದಿ ಮಂಜು .ಎಂ . ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!