ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೀರ ಕೇಸರಿ ಅಮಟೂರ ಬಾಳಪ್ಪ ಪುಣ್ಯ ಸ್ಮರಣೆ

ಬೆಳಗಾವಿ /ಬೈಲಹೊಂಗಲ : ಅಂಗರಕ್ಷಕ, ವೀರ ಕೇಸರಿ ಅಮಟೂರು ಬಾಳಪ್ಪ ಅವರ ಶೌರ್ಯ ಸಾಹಸ ನಾಡಪ್ರೇಮ ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿಯಾಗಿದೆ ಆ ವೀರ ಪರಾಕ್ರಮಿಗೆ ಸರಕಾರದಿಂದ ಸಿಗಬೇಕಾದ ಎಲ್ಲಾ ಗೌರವಗಳನ್ನು ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಂತೇಶ್ ಕೌಜಲಗಿ ಹೇಳಿದರು. ವೀರ ಕೇಸರಿ ಅಮಟೂರು ಬಾಳಪ್ಪ ಟ್ರಸ್ಟ್ ಕಮಿಟಿ ನೇತೃತ್ವದಲ್ಲಿ ಗುರುವಾರ ನಡೆದ ವೀರ ಕೇಸರಿ ಅಮಟೂರ ಬಾಳಪ್ಪ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕಿತ್ತೂರ ಶಾಸಕ ಬಾಬಾ ಸಾಹೇಬ್ ಪಾಟೀಲ ಬಾಳಪ್ಪನವರ ಚಿತ್ರ ಮೆರವಣಿಗೆಗೆ ಪೂಜೆ ಚಾಲನೆ ನೀಡಿ ವೀರ ಕೇಸರಿ ಅಮಟೂರ ಬಾಳಪ್ಪನವರ ಪುಣ್ಯ ಸ್ಮರಣೆಯ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕಿನ ಕಂದಾಯ ನಿರೀಕ್ಷಕ ಬಿ. ಆರ್. ಬೋರಗಲ್ಲ ಎಲ್ಲಾ ಕಿರಿಯ ಅಧಿಕಾರಿಗಳ ಒಳಗೊಂಡ ಅಧ್ಯಕ್ಷತೆಯ ಸಮ್ಮುಖದಲ್ಲಿ ಬಾಳಪ್ಪನವರ ಉತ್ಸವ ಅದ್ದೂರಿಯಾಗಿ ಜರುಗಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರಾಘವೇಂದ್ರ ಸಂಗಪ್ಪನವರ ತಮ್ಮ ಪಂಚಾಯಿತಿ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಉತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಸ್ವಾತಂತ್ರ್ಯ ಸೇನಾನಿ ಗಳ ಉಡುಗೆ ತೊಟ್ಟು ಮಿಂಚಿದರು. ನಯನಗರ ಗ್ರಾಮದ ಸುಖ ದೇವಾನಂದ ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ತಹಸಿಲ್ದಾರ ಎಚ್ ಎನ್ ಶಿರಹಟ್ಟಿ ಶಿಕ್ಷಣ ಅಧಿಕಾರಿ ಎ ಎನ್ ಪ್ಯಾಟಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿ ಅರುಣ್ ಕುಮಾರ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ವರದಿ ಮಂಜು .ಎಂ .ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!