ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಂಪಾದೇವನಹಳ್ಳಿ ಗ್ರಾ. ಪಂ. ಗೆ ಗಾಂಧಿ ಗ್ರಾಮ ಪುರಸ್ಕಾರ

ಬಳ್ಳಾರಿ / ಕಂಪ್ಲಿ: ಕಂಪ್ಲಿ ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು ಸೇರಿದಂತೆ ಮೂಲ ಸೌಕರ್ಯ, ಲೆಕ್ಕ ಪರಿಶೋಧನೆ, ಸರ್ಕಾರದ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ತಲುಪಿಸಿದ ಅಂಕಗಳನ್ನು ಪರಿಗಣಿಸಿ ಹಂಪದೇವನಹಳ್ಳಿ ಗ್ರಾ. ಪಂ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ವಿಧಾನಸೌಧದ ಬ್ಯಾಂಕ್ವೇಟೆ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಬೀರಲಿಂಗ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದರು.
ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ ಹಾಗೂ ಪಿಡಿಒ ಕೆ.ಬೀರಲಿಂಗ ಮಾತನಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರ ಹಾಗೂ ಎಲ್ಲಾ ಸದಸ್ಯರ ಸಹಕಾರ ಮತ್ತು ತಾ.ಪಂ.ಅಧಿಕಾರಿಗಳ ಸಹಕಾರದಿಂದಾಗಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎಂದರು. ತಾಲ್ಲೂಕಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಹಂಪಾದೇವನಹಳ್ಳಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳನ್ನು ತಾ.ಪಂ. ಇಒ ಆರ್.ಕೆ.ಶ್ರೀಕುಮಾರ್, ಮನರೇಗಾ ಸಹಾಯಕ ನಿರ್ದೇಶಕರಾದ ಕೆ.ಎಸ್.ಮಲ್ಲನಗೌಡ ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!