ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಛದ್ಮವೇಷದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ಡಿ.ಶ್ರಾವ್ಯ

ಬಳ್ಳಾರಿ / ಕಂಪ್ಲಿ: ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲ್ಲೋತ್ಸವದ ಛದ್ಮವೇಷ ಸ್ಪರ್ಧೆಯಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಕಾರ್ಯದರ್ಶಿ ಡಿ.ಮೌನೇಶ ಅವರ ಸುಪುತ್ರ ಡಿ.ಭರತ್ ಅವರ ಸುಪುತ್ರಿ ಹಾಗೂ ಚೇತನ ವಿದ್ಯಾನಿಕೇತನ ಶಾಲೆ 3ನೇ ತರಗತಿ ವಿದ್ಯಾರ್ಥಿನಿ ಡಿ.ಶ್ರಾವ್ಯ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಳ್ಳುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾಳೆ.
ಇಲ್ಲಿನ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರಾವ್ಯ ಇವರು ಛದ್ಮವೇಷದಲ್ಲಿ ಭಾಗವಹಿಸಿ, ಬಾಲರಾಮ (ರಾಮಲಲ್ಲಾ)ನ ವೇಷದಲ್ಲಿ ತೀರ್ಪುಗಾರರ ಗಮನ ಸೆಳೆದು, ಎಸ್‌ಎನ್‌ಪೇಟೆ ಕ್ಲಸ್ಟರ್‌ಯಿಂದ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡು, ಶಾಲೆಗೆ ಕೀರ್ತಿ ತರುವ ಜೊತೆಗೆ ಪೋಷಕರ ಮನಗೆದ್ದಿದ್ದಾಳೆ. ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು ಹಾಗೂ ವಿಶ್ವಕರ್ಮ ಸಮಾಜದ ತಾಲೂಕು ಕಾರ್ಯದರ್ಶಿ ಡಿ.ಮೌನೇಶ ಅವರ ಸುಪುತ್ರ ಡಿ.ಭರತ್ ಇವರು ಪ್ರಶಂಸೆ ವ್ಯಕ್ತಪಡಿಸಿದರು.
ಪ್ರಶಸ್ತಿ ವಿತರಣೆ ಸಂದರ್ಭದಲ್ಲಿ ಇಸಿಒ ರೇವಣ್ಣ, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್ವರ, ಹಿರಿಯ ಶಿಕ್ಷಕ ಚಂದ್ರಶೇಖರ, ಮುಖ್ಯಗುರುಗಳಾದ ಕೆ.ವಿಷ್ಣು, ಶಿಕ್ಷಕ ಚಂದ್ರಯ್ಯ ಸೊಪ್ಪಿನಮಠ ಸೇರಿದಂತೆ ಶಿಕ್ಷಕರು ಹಾಗೂ ಮಕ್ಕಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!