
ಉತ್ತರ ಕನ್ನಡ : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶಿರಸಿಯಲ್ಲಿ ಬಿಜೆಪಿ ಉತ್ತರ ಕನ್ನಡ ಜಿಲ್ಲೆಯ ವತಿಯಿಂದ ರೈತಪರ ಹೋರಾಟ ನೆಡಸಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ – ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಶಿರಸಿ ಸಹಾಯಕ ಆಯುಕ್ತರ ಮೂಲಕ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದ ದಿನದಿಂದ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತರಿಗೆ ಅನುಕೂಲವಾಗುವ ಅನೇಕ ರೈತಪರ ಯೋಜನೆಗಳನ್ನು ನಿಲ್ಲಿಸಲಾಗಿದೆ. ಅತಿವೃಷ್ಟಿ – ಅನಾವೃಷ್ಟಿಯಿಂದ ಆಗಿದ್ದ ಬೆಳೆ ನಾಶಕ್ಕೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಅನುದಾನ ದುರ್ಬಳಕೆ ರೈತರಿಗೆ ಆಗುತ್ತಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡಿಸಬೇಕಿದೆ. ರೈತರಿಗೆ ಸಂಕಷ್ಟಕ್ಕೇ ದುಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರಂತರ ರೈತ ವಿರೋಧಿ ನೀತಿ ಖಂಡಿಸಿ ರೈತರಿಗೆ ನ್ಯಾಯ ಕೊಡಿಸುವುದು ಗುರಿಯಾಗಿದೆ ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರರಾದ ಶ್ರೀ ಎನ್ ರವಿಕುಮಾರ, ಮಾಜಿ ಶಾಸಕರಾದ ಶ್ರೀ ಸುನೀಲ ಹೆಗಡೆ, ರಾಜ್ಯ ಮಾಧ್ಯಮ ವಕ್ತಾರರಾದ ಶ್ರೀ ಹರಿಪ್ರಕಾಶ ಕೋಣೆಮನೆ, ಮಾಜಿ ನಿಗಮ ಮಂಡಳಿ ಅಧ್ಯಕ್ಷರಾದ ಶ್ರೀ ಗೋವಿಂದ ನಾಯ್ಕ, ರಾಜ್ಯ ರೈತಮೋರ್ಚಾ ಕಾರ್ಯದರ್ಶಿ ಶ್ರೀ ಮಲ್ಲಿಕಾರ್ಜುನ, ಜಿಲ್ಲಾ ಪ್ರಧಾನಕಾರ್ಯದರ್ಶಿಗಳು, ಪ್ರಕೋಷ್ಠದವರು, ಮಂಡಲ ಅಧ್ಯಕ್ಷರು, ಎಲ್ಲಾ ಮೋರ್ಚಾದವರು, ಪಕ್ಷದ ಪ್ರಮುಖರು, ಜಿಲ್ಲಾ ಹಾಗೂ ಮಂಡಲ ಸ್ಥರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ವಿನಾಯಕ ಆಚಾರಿ



















