ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಾದೇವತಾತ ಪುಣ್ಯಸ್ಮರಣೆ ಅಂಗವಾಗಿ ಉಚ್ಛಾಯ ಮೆರವಣಿಗೆ

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ಮೆಟ್ರಿ ಗ್ರಾಮದ ಶ್ರೀ ವಿಶ್ವಾರಾಧ್ಯ ಗುರುಕುಲ ಮಠದ ಪ್ರಣವಜ್ಯೋತಿ ಮಹಾಕ್ಷೇತ್ರ ಸಂಸ್ಥಾಪಕರಾದ ಲಿಂಗೈಕ್ಯ ಹಂದ್ಯಾಳು ಮಠದ ಮಹಾದೇವತಾತನವರ 42ನೇ ಪುಣ್ಮಸ್ಮರಣೆ ಭಾನುವಾರ ಸಂಭ್ರಮದಿಂದ ಜರುಗಿತು.
ಪುಣ್ಯಸ್ಮರಣೆ ಅಂಗವಾಗಿ ಶ್ರೀಮಠದಲ್ಲಿ ಮಾತೃಶ್ರೀ ಗೌರಮ್ಮನವರ ಹಾಗೂ ಶ್ರೀತಾತನವರ ಕರ್ತೃ ಗದ್ದುಗೆ ಪ್ರಣವಜ್ಯೋತಿ ಪಂಚಪೀಠಾಧೀಶ್ವರರ ವಿಗ್ರಹ ಸೇರಿದಂತೆ ವಿವಿಧ ದೇವರ ಮೂರ್ತಿಗಳಿಗೆ ವಿಶೇಷ ರುದ್ರಾಭಿಷೇಕ, ಬಿಲ್ವಾರ್ಚನೆ ನಂತರ ಗಣಾರಾಧನೆ ನಡೆಯಿತು. ಗ್ರಾಮದಲ್ಲಿ ಶ್ರೀತಾತನವರ ಉಚ್ಛಾಯ ಶ್ರೀಮಠದಿಂದ ಬಸವಣ್ಣನಪೇಟೆ ಎದುರು ಬಸವಣ್ಣ ಕಟ್ಟೆಯವರೆಗೆ ಭಕ್ತರ ಜಯಘೋಷದೊಂದಿಗೆ ತೆರಳಿ ಮತ್ತೆ ಸ್ವಸ್ಥಾನಕ್ಕೆ ಮರಳಿತು. ಮಂಗಳವಾದ್ಯ, ಸಮ್ಮಾಳ ಮೇಳ ತಂಡದವರು ಭಾಗವಹಿಸಿದ್ದರು. ನಂತರ ಭಕ್ತರಿಂದ ಕಾರ್ತಿಕ ದೀಪೋತ್ಸವ ಜರುಗಿತು ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯರ ಪುರಾಣ ಪ್ರವಚನ ಮಹಾಮಂಲಗೊಂಡಿತು. ಎಚ್.ಎಂ. ವಿಶ್ವೇಶ್ವರಯ್ಯ ಸ್ವಾಮೀಜಿ ಪುರಾಣ ಪ್ರವಚನ, ಎ.ಎಂ.ಸೋಮಶೇಖರಯ್ಯಸ್ವಾಮಿ, ಹಾರ‍್ಮೋನಿಯಂಗೆ ಸಿ.ಡಿ. ಮೌನೇಶ್ ತಬಲಾಸಾಥ್ ನೀಡಿದರು. ಮೆಟ್ರಿ ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಹಳ್ಳಿಗಳ ಭಕ್ತರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!