ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಕಾರ್ಯನಿರತ ಪ್ರರ್ತಕರ್ತರ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

ಬಳ್ಳಾರಿ / ಕಂಪ್ಲಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆ ಅತಿಥಿಗೃಹ ಆವರಣದಲ್ಲಿ ಸೋಮವಾರ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ ಮಾತನಾಡಿ ಪತ್ರಕರ್ತರು ಸಮಾಜದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿನ ಬಹುತೇಕ ಪತ್ರಕರ್ತರು ಯಾವುದೇ ಜೀವನ ಭದ್ರತೆಯಿಲ್ಲದೆ ಸಂಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಸಮಾಜದಲ್ಲಿನ ಅಂಕು ಡೊಂಕು ಸರ್ಕಾರ ಹಾಗೂ ಜನ ಪ್ರತಿನಿಧಿಗಳನ್ನು ಎಚ್ಚರಿಸುವ ಹಾಗೂ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯತ್ಯಾಸವಾದಲ್ಲಿ ಬರಹ ಮೂಲಕ ಜಾಗೃತಿ ಮೂಡಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.

ತಾಲೂಕು ಘಟಕಕ್ಕೆ ಬಂಗಿ ದೊಡ್ಡ ಮಂಜುನಾಥ (ಅಧ್ಯಕ್ಷ), ಕರಿ ವಿರುಪಾಕ್ಷಿ (ಉಪಾಧ್ಯಕ್ಷ), ಪಿ.ವೀರೇಶ್ (ಪ್ರಧಾನ ಕಾರ್ಯದರ್ಶಿ), ಎಸ್.ಯಮನಪ್ಪ (ಕಾರ್ಯದರ್ಶಿ), ಜೀರು ಗಾದಿಲಿಂಗ(ಖಜಾಂಚಿ), ಕಾ.ಕಾ.ಸಮಿತಿ ಸದಸ್ಯರಾಗಿ ಎಂ. ಎಸ್. ವಿರೂಪಾಕ್ಷಯ್ಯ, ಸಿ.ವೆಂಕಟೇಶ, ಎಚ್.ಎಂ.ಪಂಡಿತಾರಾಧ್ಯ, ಬಿ.ರಸೂಲ್ ಇವರು ಅವಿರೋಧ ಆಯ್ಕೆಗೊಂಡರು ಎಂದು ಪ್ರಕಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ, ಈನಾಡು ತೆಲಗು ಪತ್ರಕರ್ತರಾದ ಎಂ.ಚಂದ್ರದ್ರಶೇಖರ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!