ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆ. ಎನ್. ರಾಜಣ್ಣ ಹೇಳಿಕೆಗೆ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ತೀವ್ರ ಖಂಡನೆ

ಕಲಬುರಗಿ : ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಕುರಿತು ಖಾಸಗಿ ಚಾನೆಲ್ ಸಂದರ್ಶನದಲ್ಲಿ ಮಧುಗಿರಿ ತಾಲೂಕಿನ ಶಾಸಕರು ಹಾಗೂ ಮಾಜಿ ಸಹಕಾರ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎನ್ ರಾಜಣ್ಣ ಅವರು ನೀಡಿರುವ ಹೇಳಿಕೆಯನ್ನು ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜ ಹಾಗೂ ಇತರ ಹಿಂದುಳಿದ ಸಣ್ಣ ಸಣ್ಣ (ಒಬಿಸಿ ) ಯ ಸಮುದಾಯಗಳು ಮತ್ತು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕೆ.ಎನ್ ರಾಜಣ್ಣ ಅವರು ಹಡಪದ ಅಪ್ಪಣ್ಣ ಸಮಾಜದ ನಿಷೇಧಿತ ಪದ ಬಳಸಿ, ಸಮಾಜವನ್ನು ಅವಮಾನಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ನೋವು ಉಂಟು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಒಂದು ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವುದು ಅಕ್ಷಮ್ಯವ ಅಪರಾಧ. ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ವಿರುದ್ಧದ ಸಾರ್ವಜನಿಕ ಹೇಳಿಕೆ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಸಮಾಜದಲ್ಲಿ ಜಾತಿ ಆಧಾರಿತ ತಾರತಮ್ಯ, ದ್ವೇಷ ಹಾಗೂ ಅಶಾಂತಿಗೆ ಕಾರಣ ಆಗುವಂಥದ್ದಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಸಣ್ಣ ಸಣ್ಣ ಸಮುದಾಯಗಳನ್ನು ಕೀಳಾಗಿ ಕಾಣುವುದು ಕಾಂಗ್ರೆಸ್ ನ ಸಂಸ್ಕೃತಿ ಯಾಗಿದೆ. ಆ ಪಕ್ಷದ ನಾಯಕರು ಜಾತಿಗಳನ್ನು ವೃತ್ತಿಯ ಹೆಸರಲ್ಲಿ ಹಂಗಿಸುವ ಚಾಳಿ ಬೆಳೆಸಿಕೊಂಡಿದ್ದಾರೆ. ಇದಕ್ಕೆ ಕೆ.ಎನ್ ರಾಜಣ್ಣ ಅವರ ಹೇಳಿಕೆಯೇ ತಾಜಾ ಉದಾಹರಣೆ ಎಂದು ಹೇಳಿದ್ದಾರೆ. ಹಡಪದ ಸಮಾಜವನ್ನು ಅಪಮಾನಿಸಿದ ಕೆ.ಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ನ ವರಿಷ್ಠರು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ವತಿಯಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ರೀತಿಯ ಜಾತಿ ನಿಂದನೆ ಪದಕ್ಕೆ ಕಡಿವಾಣ ಹಾಕುವ ಕೆಲಸ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು. ಈ ನಿಟ್ಟಿನಲ್ಲಿ ಈಗೀನ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಕಾಯಕ ಬಂಧುಗಳಿಗೆ ‘ಜಾತಿ ನಿಂದನೆ ” ಮಾಡಿ ಈ ಕ್ಷೌರಿಕ ಸಮಾಜಕ್ಕೆ ಅಪಹಾಸ್ಯ ಮಾಡಿ ಚುಚ್ಚು ಮಾತನಾಡುವ ವ್ಯಕ್ತಿಗಳಿಗೆ, ಕಾನೂನು ಪ್ರಕಾರ “ಅಟ್ರಾಸಿಟಿ” ಕಾನೂನು ಜಾರಿಗೆ ತರುವಂತೆ ಸರ್ಕಾರ ಸೊಕ್ತ ಚರ್ಚೆ ಅಧಿವೇಶನದಲ್ಲಿ ಮಾಡಲಿ. ಈ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ (ಕಾಯಕ) ಬಂಧುಗಳಿಗೆ ನ್ಯಾಯ ಸಿಗಲಿ ಎಂಬುದು ಈ ಕರ್ನಾಟಕ ರಾಜ್ಯದ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಬಹು ದಿನಗಳ ಈ ಬೇಡಿಕೆಯ ಈಡೇರಲಿ. ಸಮಾಜದ ಜನತೆ ತೆಲೆ ಎತ್ತಿ ಗೌರವದಿಂದ ಕಾಣುವ ಹಾಗೆ ಬೆಳೆಯಬೇಕು ನಮ್ಮ ಸಮಾಜದ ಜನತೆ ಎಂದು ಈ ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!