ಬಳ್ಳಾರಿ / ಕಂಪ್ಲಿ : ಇಲ್ಲಿನ ವೀರಶೈವ ಸಂಘದ ಶಾರದಾ ಶಾಲೆಯಲ್ಲಿ ಸೋಮವಾರ ವೀರಶೈವ ಮಹಾಸಭಾ ಹಾಗೂ ಸಮಾಜದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಪುಷ್ಪ ನಮನ ಸಲ್ಲಿಸಿದ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ ಮಾತನಾಡಿ ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಸಮಾಜಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಅಖಿಲ ರಂಜಿತ್ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಲಿಗಾರ್ ವೆಂಕಟರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಬಿ.ಎಂ. ಪುಷ್ಪ, ಬಳ್ಳಾರಿ ಜಿಲ್ಲಾ ನಿರ್ದೇಶಕರಾದ ಎಂ. ವಿಜಯಲಕ್ಷ್ಮಿ, ಪ್ರಮುಖರಾದ ಕಲ್ಗುಡಿ ವಿಶ್ವನಾಥ, ಎಸ್. ಡಿ. ಬಸವರಾಜ, ಅಲಬನೂರು ಬಸವರಾಜ, ಅಮರೇಗೌಡ, ಡಾ. ಹಿರೇಮಠ ಜಗನ್ನಾಥ, ಎಚ್. ನಾಗರಾಜ, ಸೋಗಿ ಸಂತೋಷ, ಬಿ.ಎಮ್. ರುದ್ರಾಯಸ್ವಾಮಿ, ಚಂದ್ರಶೇಖರ, ಬಸವರಾಜ, ವೀರಶೈವ ಸಮಾಜದವರು ಸೇರಿದಂತೆ ಶಾಲಾ ಶಿಕ್ಷಕ – ಶಿಕ್ಷಕಿಯರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















