ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆ

ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ವಿವಿಧ ಸಮಾಜಮುಖಿ ಕಾರ್ಯ: ಬಸವರಾಜ ಅಲೂರ

ವಿಜಯಪುರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ಶಿಕ್ಷಕರು ಮತ್ತು ನಿವೃತ್ತ ಎಲ್.ಆಯ್.ಸಿ ಅಧಿಕಾರಿಗಳಾದ ಬಸವರಾಜ ಆಲೂರ ಹೇಳಿದರು.

ನಗರದ ಗ್ಯಾಂಗ್ ಬಾವಡಿಯ ದೊಡಮನಿ ಫಂಕ್ಷನ್ ಹಾಲ್ ನಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಜಯಪುರ 2 ತಾಲ್ಲೂಕಿನ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಹಿಳಾ ಸಬಲೀಕರಣ, ಗ್ರಾಮೀಣ ಅಭಿವೃದ್ಧಿಗೆ ಯೋಜನೆಗಳನ್ನು ನೀಡಿ ಸಮಾಜ ಸೇವೆ ಮಾಡುತ್ತಿದ್ದಾರೆ ಎಂದರು.

ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕರಾದ ಸಂತೋಷ ಕುಮಾರ ಮಾತನಾಡಿ, ‘ದೇವರ ಆರಾಧನೆಯೊಂದಿಗೆ ನಾವು ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದ ಸುಮಾರು ಎಪ್ಪತೈದು ಸಾವಿರ ಶಾಲೆಗಳಿಗೆ ಪೀಠೋಪಕರಣ, ಹೈನುಗಾರಿಕೆಯನ್ನು ಉತ್ತೇಜಿಸಲು 5 ಸಾವಿರ ಹಾಲಿನ ಉತ್ಪಾದಕರ ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚು ಕೆರೆಗಳ ಅಭಿವೃದ್ಧಿ , ಸ್ವಸಹಾಯ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ , ಆರೋಗ್ಯ ರಕ್ಷಣೆಗೆ ವಿಶೇಷ ವಿಮಾ ಯೋಜನೆಗಳನ್ನು ನೀಡಿದೆ ಎಂದರು.

ನಗರದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ವರಮಹಾಲಕ್ಷ್ಮಿ ದೇವಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮಂಜುನಾಥ ಸ್ವಾಮಿ ಭಾವಚಿತ್ರವನ್ನು ಇರಿಸಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಪೂಜೆ ಶ್ರೀ ಬಸವಲಿಂಗಯ್ಯ ಸ್ವಾಮಿಗಳು ವಹಿಸಿದರು. ಅಧ್ಯಕ್ಷತೆಯನ್ನು ಉಮೇಶ ವಂದಾಲ ವಹಿಸಿದರು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ನಿರ್ದೇಶಕರಾದ ಸಂತೋಷ ಕಮಾರ, ಅರ್ಜುನ ಕೌಟೆಕರ,ಮಹೇಶ ಒಡೆಯರ್,ಶ್ರೀಕಾಂತ ಜಳಕೆ, ವಿಶ್ವನಾಥ ಮದ್ದಿನಮಠ, ಯೋಜನಾಧಿಕಾರಿ ಸತೀಶ್, ದಿವ್ಯಾ ಗುಡ್ಡಾಪುರ, ಶಾಂತಾ ಉತ್ಸಾಲಕರ, ಭಾಗ್ಯಶ್ರೀ ಹಳ್ಳದಕರ್, ಕವಿತಾ ಮದ್ದಿನಮಠ, ಪಲ್ಲವಿ ಗುಡ್ಡಾಪೂರ,ನಾಗಮ್ಮ ಚೌಡಾಯ, ಕಾವ್ಯಾ ಹಿರೇಮಠ, ಲಕ್ಷ್ಮೀ ಗಾಯಕವಾಡ,ಗೀತಾ ಕಾರಪುರ, ಲಲಿತಾ ಬೂಸನೂರ, ಮತ್ತು ಯೋಜನೆಯ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!