ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜ್ಞಾನಜ್ಯೋತಿ ” ರಾಜ್ಯ ಪ್ರಶಸ್ತಿಗೆ ಆಯ್ಕೆ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಎಸ್ ಎಂ ಬಿರಾದಾರ್ (ಲಚ್ಯಾಣ) ಇವರ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ, ಚಿತ್ರದುರ್ಗದ ಶಿಕ್ಷಣ ಜ್ಞಾನ ಪತ್ರಿಕೆಯವರು ನೀಡುವ “ಜ್ಞಾನ ಜ್ಯೋತಿ”ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಾಳೆ ರವಿವಾರ ದಿ: 21/12/2025 ರಂದು ಹಾಸನ ನಗರದ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ನಡೆಯಲಿರುವ ಶಿಕ್ಷಣ ಜ್ಞಾನಪತ್ರಿಕೆಯ 23 ನೇ ವಾರ್ಷಿಕೋತ್ಸವ, ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಪ್ರಶಸ್ತಿಗಳ ಆಯ್ಕೆ ಸಮಿತಿಯ ವಿಜಯಪುರ ಜಿಲ್ಲಾ ಪ್ರತಿನಿಧಿ ಆರ್ ವಿ ಪಾಟೀಲ್ (ಹಿರೇ ಬೇವನೂರ) ಶಿಕ್ಷಕರು ತಿಳಿಸಿದ್ದಾರೆ.
ಪ್ರಶಸ್ತಿ ವಿಜೇತ ಎಸ್ಎಂ ಬಿರಾದಾರ್ ಶಿಕ್ಷಕರಿಗೆ ಅಗರಖೇಡ ಗ್ರಾಮದ ಹಿರಿಯರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹ ಸಿಬ್ಬಂದಿಯವರು ಮತ್ತು ಇಂಡಿ ತಾಲೂಕಿನ ಶಿಕ್ಷಕರ ಬಳಗದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!