ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಿನಾಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ

ಬಳ್ಳಾರಿ / ಕಂಪ್ಲಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಡಿ.29ರ ವಿಶ್ವ ಮಾನವ ದಿನಾಚರಣೆ ಹಾಗೂ 2026ರ ಜ.1ರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.
ತಹಶೀಲ್ದಾರ್ ಜೂಗಲ್ ಮಂಜುನಾಯಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇಂತಹ ದಿನಾಚರಣೆ ದಿನದಂದು ಮಹಾನ್ ನಾಯಕರ ಹಾಗ ಶರಣ ಸಂತರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ನಂತರ ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಡಿ. ಮೌನೇಶ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಸಹ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸುವ ಜೊತೆಗೆ ದಿನಾಚರಣೆದಂದು ಶಿಲ್ಪಿಗಳನ್ನು ಕರೆಸಿ ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಶಿರಸ್ತೇದಾರ ರಮೇಶ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಡಿ.ರುದ್ರಪ್ಪ ಅಚಾರ್, ಉಪಾಧ್ಯಕ್ಷ ಕಾಳಚಾರಿ ಎ.ಚಂದ್ರಶೇಖರ, ಮುಖಂಡರಾದ ಆನಂದಾಚಾರ್, ಎ. ಮೌನೇಶ ಆಚಾರ್, ಮಂಜುನಾಥ, ಚನ್ನಪ್ಪ, ಬಸವರಾಜ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!