ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲಸಿಕೆ ಹಾಕಿಸುವುದರಿಂದ ಮಕ್ಕಳನ್ನು ಪೋಲಿಯೊಗೆ ತುತ್ತಾಗದಂತೆ ರಕ್ಷಿಸಬಹುದು : ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಸಂಚಾಲಕ ಬಡಿಗೇರ್ ಜಿಲಾನಸಾಬ್

ಬಳ್ಳಾರಿ/ ಕಂಪ್ಲಿ : ‘ಪಲ್ಸ್ ಪೋಲಿಯೊ ಲಸಿಕೆಯನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ನೀಡುವುದರಿಂದ ಮಕ್ಕಳನ್ನು ಪೋಲಿಯೊಗೆ ತುತ್ತಾಗದಂತೆ ರಕ್ಷಿಸಬಹುದು’ ಎಂದು ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಸಂಚಾಲಕ ಬಡಿಗೇರ್ ಜಿಲಾನಸಾಬ್ ಹೇಳಿದರು.

ಪಟ್ಟಣದ ಕೋಟೆ ಪ್ರದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ವಿಶೇಷವಾಗಿ ನವಜಾತ ಶಿಶುಗಳಿಗೆ ಲಸಿಕೆ ಹಾಕಿ ಚಾಲನೆ ನೀಡಿ ಅವರು ಮಾತನಾಡಿ ‘ವಿಶ್ವಸಂಸ್ಥೆ ಮತ್ತು ರೋಟರಿ ಅಂತರರಾಷ್ಟ್ರೀಯ ಸಂಸ್ಥೆ ಸಹಕಾರದೊಂದಿಗೆ ಆರಂಭವಾದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಇಂದು ವಿಶ್ವದ ಅನೇಕ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ವರವಾಗಿದೆ. ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದು, ಇದನ್ನು ಕಾಯ್ದುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಹೆಗಲಿಗಿದೆ’ ಎಂದರು.

ಮಕ್ಕಳಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಹಾಗೂ ಸಂಘ- ಸಂಸ್ಥೆಗಳು ಬೂತ್ ಗಳಲ್ಲಿ, ಬಸ್ ನಿಲ್ದಾಣದಲ್ಲಿಯೂ ಬೂತ್ ತೆರೆದು ಪ್ರಯಾಣಿಸುವ ಮಕ್ಕಳಿಗೆ ಲಸಿಕೆ ಹಾಕಿಸಲು ಸಹಕಾರಿಯಾಗಿದೆ ಎಂದರು.

ಲಸಿಕೆ ಅಭಿಯಾನದಲ್ಲಿ ಎಪಿಎಂಸಿ ಸಮಿತಿಯ ನಾಮ ನಿರ್ದೇಶಕರಾದ ಟಿ. ಲಕ್ಷ್ಮೀ ದೇವಿಯಮ್ಮ, ಬಡಿಗೇರ್ ದೊಡ್ಡ ಖಾಜಸಾಬ್, ಬಸವರಾಜ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದ ಆರ್. ವಲಿಮಾ, ಶಿವಲೀಲಮ್ಮ, ಗಿರಿಜಾ, ಸಹಾಯಕಿಯರಾದ ಖಾನಮ್ಮ, ರಾಧಾ, ಶರಣಮ್ಮ, ತಾಯಂದಿರಾದ ಕಾವ್ಯ, ವಸಂತಮ್ಮ ಸೇರಿದಂತೆ ಇತರರು ಇದ್ದರು.

ವರದಿ : ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!