ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಕ್ಕಮಾಲಾಪುರ ಗ್ರಾಮ ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

ಚಾಮರಾಜನಗರ/ಹನೂರು : ಚಿಕ್ಕಮಾಲಾಪುರ ಗ್ರಾಮ ಪಂಚಾಯತಿ ಕಾರ್ಯಾಲಯ 2024-25 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಹಾಗೂ 15 ನೇ ಹಣಕಾಸು ಯೋಜನೆಯ ಲೆಕ್ಕ ಪರಿಶೋಧನಾ ಸಭೆಯು ಗ್ರಾಮ ಪಂ. ಅಧ್ಯಕ್ಷೆ ಪುಷ್ಪ ಅಂಕರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರಗೊಡು ಗ್ರಾಮದ ಲಂಬಾಣಿ ತಾಂಡಾದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ನರೇಗಾ ಯೋಜನೆಯಡಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಿಳಿಸಿ ಕೊಡಲಾಯಿತು. ಹಾಜರಿದ್ದ ಸಾರ್ವಜನಿಕರು ಸಮಸ್ಯೆಗಳು ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.

ತಾಲೂಕು ಸಂಯೋಜಕ ನಾರಾಯಣ್ ಮಾತನಾಡುತ್ತಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 87 ಕಾಮಗಾರಿಗಳು ನಡೆದಿವೆ. ನಡೆದಿರುವ ಕಾಮಗಾರಿಗಳಿಗೆ 4,15,3318.00, ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಸವಿವರವಾಗಿ ಮಂಡಿಸಿದರು. ಹಾಗೂ 15 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಿಳಿಸಿ ಖರ್ಚು ವೆಚ್ಚಗಳನ್ನು ಸವಿವರವಾಗಿ ಸಭೆಯಲ್ಲಿ ಮಂಡಿಸಿದರು.

ನರೇಗಾ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದ್ದು ವಸತಿ ಯೋಜನೆ, ಕುರಿ ಕೊಟ್ಟಿಗೆ. ಧನದ ಶೇಡ್, ಕೆರೆಕಟ್ಟೆ ಕಾಲುವೆ ಹೂಳೆತ್ತುವುದು ಸೇರಿದಂತೆ ಗ್ರಾಮದ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬಹುದಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಅಂಕರಾಜು, ಸದಸ್ಯೆ ರಾಜಿಬಾಯಿ, ನೋಡಲ್ ಅಧಿಕಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಿದ್ದರಾಜು, ನರೇಗಾ ಸಂಯೋಜಕ ನಾರಾಯಣ್, ಪಿ.ಡಿ.ಒ ಮಹದೇವಪ್ರಭು, ಲೆಕ್ಕ ಸಹಾಯಕ ಮಲ್ಲುಸ್ವಾಮಿ, ಮನೋಜ್, ಸಾಗರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮಸ್ಥರು, ಮಹಿಳೆಯರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!