ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪಘಾತ : ಮೂವರ ಸಾವು

ಬಳ್ಳಾರಿ/ ಸಿರುಗುಪ್ಪ : ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150) ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ.
ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ : ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು
ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಏನಿರಬಹುದೆಂಬ ತನಿಖೆ ನಡೆಯುತ್ತಿದೆ.
ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!