ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳ ವಿಶೇಷ ಗ್ರಾಮ ಸಭೆ

ಚಾಮರಾಜನಗರ/ ಹನೂರು :
ಮಕ್ಕಳ ವಿಶೇಷ ಗ್ರಾಮ ಸಭೆ ರಾಜ್ಯಕ್ಕೆ ಅಲ್ಲ ದೇಶಕ್ಕೆ ಮಾದರಿ ಗ್ರಾಮ ಸಭೆ ಆಯೋಜಿಸಿರುವುದು ಮಕ್ಕಳ ಹಕ್ಕುಗಳ ಬೇಡಿಕೆಗೆ ಅನುಕೂಲಕ್ಕೆ ತಕ್ಕಂತೆ ಜನಪ್ರತಿನಿಧಿ ಅಧಿಕಾರಿಗಳು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಚಾಮರಾಜನಗರ ತಾಲೂಕು ಪಂಚಾಯಿತಿ ಹನೂರು ಮಣಗಳ್ಳಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿಯೇ ಮಾದರಿಯಾಗಿ ಮಕ್ಕಳ ವಿಶೇಷ ಗ್ರಾಮ ಸಭೆಯೇ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಕಾರ್ಯಕ್ರಮವನ್ನು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಉತ್ತಮವಾದ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಬೇಕಾಗಿರುವ ಮಾಹಿತಿ ತಂತ್ರಜ್ಞಾನ ಸಾಮರ್ಥ್ಯವನ್ನು ಜಮಾಸ್ ಜನಸಾಮಾನ್ಯರಿಗೆ ಪಾರದರ್ಶಕತೆ ಮತ್ತು ಜನಸ್ನೇಹಿ ಆಡಳಿತ ನೀಡುವ ಹಿತದೃಷ್ಟಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಮಕ್ಕಳು ದೇಶದ ಆಸ್ತಿ ಹೀಗಾಗಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವ ರೀತಿಯಲ್ಲಿಯೂ ಕಾರ್ಯಕ್ರಮವನ್ನು ಜನಪ್ರತಿನಿಧಿ ಅಧಿಕಾರಿಗಳು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಚಿವರು ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣ್ಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಆಯೋಜನೆ ಮಾಡಲು ಅವಕಾಶ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಚಾಮರಾಜನಗರ ಜಿಲ್ಲೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಉತ್ತಮ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ತಮ್ಮ ಸುತ್ತಮುತ್ತಲಿನ ಶಾಲೆ ಹಾಗೂ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಸಚಿವರ ಜೊತೆ ಮಾತನಾಡಿ ಕಾರ್ಯಕ್ರಮದ ಸದುದ್ದೇಶವನ್ನು ತಿಳಿದುಕೊಂಡು ಪೂರಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ಮತ್ತು ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖಾಂತರ ಪಂಚತಂತ್ರ ತಂತ್ರಾಂಶವನ್ನು ಆರಂಭಿಸಿ ಈಗ ಕಾರ್ಯಕ್ರಮವನ್ನು ಸುಧಾರಿತ ಆವೃತ್ತಿಯಲ್ಲಿ ಚಾಲ್ತಿಯಲ್ಲಿದ್ದು ಪ್ರತಿಯೊಬ್ಬರ ನಾಗರಿಕರ ಆಸ್ತಿ ಸಂಬಂಧಿಸಿದಂತೆ ಅನುಮತಿ ಕಟ್ಟಡ ಮತ್ತು ವ್ಯಾಪಾರ ಬರವಣಿಗೆಗಳು ಮತ್ತು ದೂರುಗಳ ಸಲ್ಲಿಕೆ ಅಂತಹ ನಾಗರಿಕ ಸೇವೆಗಳನ್ನು ಒದಗಿಸಲು ಆಸ್ತಿ ತೆರಿಗೆ ಸಂಗ್ರಹಣೆಯನ್ನು ನಿರ್ವಹಣೆ ಮಾಡಲು ತಂತ್ರಜ್ಞಾನದ ಮೂಲಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಉತ್ತಮ ಕಾರ್ಯಕ್ರಮ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಲೂಕಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರ ನಾಗರಿಕರ ಮತ್ತು ಮಕ್ಕಳ ಅಭಿವೃದ್ಧಿ ಹೆಚ್ಚಿನ ಹೊತ್ತು ನೀಡಿದ್ದಾರೆ ಎಂದು ತಿಳಿಸಿದರು.

ಶಾಲಾ ವಿದ್ಯಾರ್ಥಿಗಳ ಪ್ರಶ್ನೆಗೆ ಸಚಿವರಿಂದ ಭರವಸೆ : ಹನೂರು ಶೈಕ್ಷಣಿಕ ವಲಯದ ಹಲವು ಮೂಲೆ ಬೈರನಾಥ ಹಾಗೂ ಮಣ್ಣಗಳ್ಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆ ಕುಡಿಯುವ ನೀರಿನ ಸಮಸ್ಯೆ ಆಟದ ಮೈದಾನ ಮತ್ತು ಸ್ಮಾರ್ಟ್ ಕ್ಲಾಸ್ ನಡೆಸಲು ಬೋರ್ಡ್ ಗಳ ಅಭಿವೃದ್ಧಿ ಪಡಿಸಿ ಉತ್ತಮ ದರ್ಜೆಯ ಕಿಟ್ ಗಳನ್ನು ವಿತರಣೆ ಮಾಡುವಂತೆ ಮತ್ತು ಬಸ್ಸಿನ ವ್ಯವಸ್ಥೆ ರಸ್ತೆ ಹಾಗೂ ಗ್ರಾಮಗಳಲ್ಲಿ ರೈತರ ಜಮೀನುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಸಚಿವರ ಜೊತೆ ಕಾರ್ಯಕ್ರಮದಲ್ಲಿ ಸಮಸ್ಯೆ ಸರಮಾಲೆಯನ್ನೇ ತೆರೆದಿಟ್ಟರು ಇದಕ್ಕೆ ಪೂರಕವಾಗಿ ಉತ್ತರಿಸಿದ ಸಚಿವರು ಸರ್ಕಾರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಆಡಳಿತ ನೀಡುವ ಮೂಲಕ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಆಯೋಜನೆ ಮಾಡಿರುವುದು ಆಡಳಿತದಲ್ಲಿ ಸುಧಾರಣೆ ತರಲು ಮತ್ತು ವಿದ್ಯಾರ್ಥಿಗಳು ಕೇಳಿರುವ ಸಮಸ್ಯೆಗಳ ಪಟ್ಟಿಯನ್ನು ಮತ್ತು ಅದಕ್ಕೆ ಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿ ವಿದ್ಯಾರ್ಥಿಗಳಿಗೂ ಸಹ ಭರವಸೆ ತುಂಬಿ ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ ಟಿ ಕವಿತಾ ಮತ್ತು ಜಿಲ್ಲಾ ಪಂಚಾಯತಿ ಸಿಇಓ ಮೋನರೋತ್ ತಾಲೂಕು ದಂಡಾಧಿಕಾರಿ ಸೇರಿದಂತೆ ಮಹಿಳಾ ಅಧಿಕಾರಿಗಳ ಹೆಚ್ಚಾಗಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ವಿದ್ಯಾರ್ಥಿಗಳು ಸಹ ಇದೇ ರೀತಿಯಲ್ಲಿಯೇ ಓದಿನ ಕಡೆ ಗಮನ ಹರಿಸಿ ಉತ್ತಮ ರೀತಿಯಲ್ಲಿ ತೇರ್ಗಡೆಯಾಗುವ ಮೂಲಕ ಸರ್ಕಾರದ ಸವಲತ್ತು ಪಡೆದು ಸದ್ಬಳಕೆ ಮಾಡಿಕೊಳ್ಳಿ ಎಂದು ಭರವಸೆ ನೀಡಿದರು.

ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖಾಂತರ ಸರ್ಕಾರದಿಂದ ಸಿಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಶೂ ಹಾಗೂ ಅಕ್ಷರ ದಾಸೋಹದಿಂದ ಬಿಸಿಯೂಟ ವ್ಯವಸ್ಥೆ ಇನ್ನಿತರ ವ್ಯವಸ್ಥೆಗಳನ್ನು ಇಲಾಖೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದರು. ಆರೋಗ್ಯ ಇಲಾಖೆಯ ಹಿರಿಯ ತಾಲೂಕು ವೈದ್ಯಾಧಿಕಾರಿ ಪ್ರಕಾಶ್ ಮಾತನಾಡಿ ಮಕ್ಕಳ ಗ್ರಾಮ ಸಭೆ ಆಯೋಜಿಸುವುದು ಉತ್ತಮ ಕಾರ್ಯಕ್ರಮವಾಗಿದ್ದು ಗ್ರಾಮಗಳಲ್ಲಿ ಬಾಲ್ಯ ವಿವಾಹ ತೊಡೆದು ಹಾಕಲು ಉತ್ತಮ ಕಾರ್ಯಕ್ರಮ ಇದಾಗಿದ್ದು ಆರೋಗ್ಯ ಇಲಾಖೆಯಲ್ಲಿ ಸಿಗುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಾಗರಿಕರು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.

ಪೊಲೀಸ್ ಎಂದರೆ ಭಯಬೇಡ ನೇರವಾಗಿ ದೂರು ಸಲ್ಲಿಸಿ:
ಮಕ್ಕಳ ಗ್ರಾಮ ಸಭೆಯಲ್ಲಿ ಸಭೆ ಇನ್ಸ್ ಪೆಕ್ಟರ್ ಶಿವಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ಆಪ್ತ ಗೆಳತಿ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಮುಖಾಂತರ ಯಶಸ್ವಿಯಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿ, ಪೊಲೀಸ್ ಠಾಣೆ ಎಂದರೆ ಭಯಬೇಡ ನೇರವಾಗಿ ದೂರುಗಳಿದ್ದರೆ ಸಲ್ಲಿಸಿ ಭಯಮುಕ್ತರಾಗಿ ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೊಲೀಸ್ ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ಇದೇ ವೇಳೆಯಲ್ಲಿ ತಿಳಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಚಯ್ಯ, ಚಾಮುಲ್ ನಿರ್ದೇಶಕರಾದ ಮಹದೇವ ಪ್ರಸಾದ್,ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೆಂಕಟೇಶ್, ಪಶು ಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ಕಾರ್ಯ ನಿರ್ವಹಣಾಧಿಕಾರಿ ಉಮೇಶ್, ಮಣ್ಣಗಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು, ಪ್ರೌಢ ಶಾಲೆಯ ಸ್ಥಳದ ದಾನಿಗಳಾದ ರಾಜು, ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ ವಿದ್ಯಾರ್ಥಿಗಳು, ನಾಗರಿಕರು ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!